Advertisement

ಉಡುಪಿ ಜಿಲ್ಲೆಯ ಹಿರಿಮೆ; ರಾಜ್ಯದಲ್ಲೇ ಅತ್ಯಧಿಕ ಮಹಿಳಾ ಮತದಾರರು

12:25 AM Jan 09, 2023 | Team Udayavani |

ಉಡುಪಿ:ಇತ್ತೀಚೆಗೆ ನಡೆದ 2023ರ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆಯ ಬಳಿಕ ಪ್ರಕಟಿಸಲಾದ ಅಂತಿಮ ಪಟ್ಟಿ ಪ್ರಕಾರ ಜಿಲ್ಲಾವಾರು ಮತದಾರರ ಸಂಖ್ಯೆಯಲ್ಲಿ ರಾಜ್ಯ ದಲ್ಲೇ ಅತೀ ಹೆಚ್ಚು ಮಹಿಳಾ ಮತದಾರರು ಉಡುಪಿ ಜಿಲ್ಲೆಯಲ್ಲಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಅತೀ ಕಡಿಮೆ ಮಹಿಳಾ ಮತದಾರರಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣ ಆಯುಕ್ತರು ಟ್ವೀಟ್‌ ಮಾಡಿದ್ದಾರೆ.

Advertisement

ಉಡುಪಿ ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲೂ ಅಲ್ಲಲ್ಲಿನ ಮತದಾರರ ಒಟ್ಟು ಸಂಖ್ಯೆಯಲ್ಲಿ ಪುರುಷ ಮತದಾರರೇ ಹೆಚ್ಚಿದ್ದಾರೆ.

ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಅನಂತರ ರಾಜ್ಯದಲ್ಲಿ 5,05,48,553 ಮತದಾರ ರಿದ್ದು, 2,54,49,725 ಪುರುಷ ಹಾಗೂ 2,50,94,326 ಮಹಿಳಾ ಮತದಾರರಿದ್ದಾರೆ. ಒಟ್ಟು ಪುರುಷ ಮತದಾರರು ಹೆಚ್ಚಿದ್ದಾರೆ. ಆದರೆ ಉಡುಪಿ ಜಿಲ್ಲೆಯ 10,16,245 ಮತದಾರ ರಲ್ಲಿ 4,90,060 ಪುರುಷರು ಮತ್ತು 5,26,173 ಮಹಿಳೆಯರು ಮತ್ತು 12 ಲಿಂಗತ್ವ ಅಲ್ಪಸಂಖ್ಯಾಕ ರಿದ್ದಾರೆ. ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ನಡೆದ ಮತದಾರರ ಪಟ್ಟಿಯ ಪರಿಷ್ಕರಣೆಯ ಸಂದರ್ಭ 13,816 ಯುವ ಮತ ದಾರರು ನೋಂದಣಿಯಾಗಿದ್ದು, ಇದರಲ್ಲೂ ಯುವತಿಯರ ಸಂಖ್ಯೆ ಅಧಿಕ.

ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ಯುವ ಮತದಾರರ ಸೇರ್ಪಡೆಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಎಲ್ಲ ಕಾಲೇಜುಗಳಲ್ಲಿ ವಿಶೇಷ ಆಭಿಯಾನ ನಡೆಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ, ತಿದ್ದು ಪಡಿಗೆ ಅರ್ಜಿಗಳನ್ನು ಸಲ್ಲಿಸಿದ್ದು, ಯಾವುದೇ ಆಕ್ಷೇಪಗಳಿಗೆ ಅವಕಾಶ ವಿಲ್ಲದಂತೆ ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Advertisement

ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮತದಾರರು ಇದ್ದು, ಇದು ರಾಜ್ಯಕ್ಕೆ ಮಾದರಿಯಾಗಿದೆ.
– ಕೂರ್ಮಾರಾವ್‌ ಎಂ.
ಉಡುಪಿ ಜಿಲ್ಲಾಧಿಕಾರಿ

 

Advertisement

Udayavani is now on Telegram. Click here to join our channel and stay updated with the latest news.

Next