Advertisement

Loksabha ಚುನಾವಣೆಯಲ್ಲಿ ‘ಕೈ’ಗೆ ಮತ ನೀಡದಿದ್ರೆ ಗ್ಯಾರಂಟಿ ಯೋಜನೆ ರದ್ದು: ಶಾಸಕ ಬಾಲಕೃಷ್ಣ

08:35 AM Jan 31, 2024 | Team Udayavani |

ರಾಮನಗರ: ಲೋಕಸಭೆ ಚುನಾವಣೆಯಲ್ಲಿ ಮತ ನೀಡದಿದ್ದರೆ ಗ್ಯಾರಂಟಿ ಯೋಜನೆ ರದ್ದು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ ಚರ್ಚೆಗೆ ಕಾರಣವಾಗಿದೆ.

Advertisement

ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಸಂಸದ ಡಿ.ಕೆ ಸುರೇಶ್ ಪರ ಮತ ನೀಡುವಂತೆ ಜನರಿಗೆ ತಾಕೀತು ಮಾಡಿದ ಬಾಲಕೃಷ್ಣ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ರದ್ದು ಎಂದಿದ್ದಾರೆ.

ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಗ್ಯಾರಂಟಿಗಳನ್ನು ನೀಡಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟವಿಲ್ಲ ಎಂದರ್ಥ. ಹಾಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಯೂ ಚರ್ಚೆ ಮಾಡಿದ್ದೇನೆ ಎಂದಿದ್ದಾರೆ.

ನಿಮ್ಮ ಮತ ಅಕ್ಷತೆ ಕಾಳಿಗೋ ಅಥವಾ ಐದು ಗ್ಯಾರಂಟಿಗೋ ಎಂದು ಯೋಚನೆ ಮಾಡಿ. ಈ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದರೆ ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ. ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದಾರೆ ಎಂದಲ್ಲವೇ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next