Advertisement

Vijayapura; ಹಿಂದಿನ ಸರ್ಕಾರದ ಸಾಲ ಭಾರದ ಮಧ್ಯೆಯೂ ಗ್ಯಾರಂಟಿ ಯಶಸ್ವಿ: ಎಂ.ಬಿ.ಪಾಟೀಲ್

03:09 PM Feb 02, 2024 | keerthan |

ವಿಜಯಪುರ: ಹಿಂದಿನ ಸರ್ಕಾರ ಸಾಲ ಹೊರಿಸಿ ಹೋಗಿದ್ದರೂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಯಶಸ್ವಿಯಾಗಿವೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಮ್ಮ ಸರ್ಕಾರದ ಸಾಧನೆಯನ್ನು ಬಣ್ಣಿಸಿದರು.

Advertisement

ಶುಕ್ರವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಹಮ್ಮಿಕೊಂಡಿರುವ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಲೋಕಾರ್ಪಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾಲ್ಗೊಂಡಿರುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಮೊದಲ ಸರ್ಕಾರದ ಅವಧಿಯಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಬಸವೇಶ್ವರ ಫೋಟೋ ಅಳವಡಿಸಲು ಕ್ರಮ ಕೈಗೊಂಡಿದ್ದು, ವಿಜಯಪುರದಲ್ಲಿ ಇರುವ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಹೆಸರು ನಾಮಕರಣ ಮಾಡಿದೆ. ಇದೀಗ ಬಸವೇಶ್ವರರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಾಗಿದೆ ಎಂದು ಶ್ಲಾಘಿಸಿದರು.

ಇದಲ್ಲದೆ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಯೋಜನೆಗಳ ಅನುಷ್ಠಾನಕ್ಕೆ ನ್ಯಾಯಾಲಯದಲ್ಲಿ ನೆರೆಯ ರಾಜ್ಯಗಳು ದಾಖಲಿಸಿರುವ ತ್ಯಾಜ್ಯದಿಂದ ಕೃಷ್ಣಾ ಭಾಗ್ಯ ಜಲ ನಿಗಮದಿಂದ ಯೋಜನೆಗಳ ಅನುಷ್ಠಾನಕ್ಕೆ ಸಮಸ್ಯೆಯಾಗಿದೆ. ಸಮರ್ಥ ನಾಯಕ ಸಿದ್ಧರಾಮಯ್ಯ ಇಂತವನ್ನೆಲ್ಲ ಸುಲಭವಾಗಿ ನಿಭಾಯಿಸುವ ಕೆಲಸ ಮಾಡಲಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು

Advertisement

Udayavani is now on Telegram. Click here to join our channel and stay updated with the latest news.

Next