Advertisement
ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮದ ಜತೆ ಮಾತನಾಡಿದ ಅವರು, ವಿರೋಧ ಪಕ್ಷಗಳು ತಾವು ಕೊಟ್ಟ ವಚನ ಈಡೇರಿಸಿಲ್ಲ. ನಾವು ಹಿಂದೆಯೂ ನಮ್ಮ ವಚನ ಈಡೇರಿಸಿದ್ದೇವೆ. ಈಗಲೂ ಈಡೇರಿಸುತ್ತೇವೆ. ಐದು ಗ್ಯಾರಂಟಿಗಳ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ವಿವರಗಳನ್ನು ಮಂಡಿಸಲು ಸೂಚಿಸಲಾಗಿದೆ. ಈ ಕುರಿತು ಚರ್ಚಿಸಿ ಅನುಮೋದನೆ ನೀಡಿ ಶೀಘ್ರವೇ ಅವುಗಳನ್ನು ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.
ಕೊಡಗು, ಹಾವೇರಿ, ಹಾಸನ , ಚಿಕ್ಕಮಗಳೂರು ಮತ್ತಿತರ ಜಿಲ್ಲೆಗಳಿಗೆ ಪ್ರಾತಿನಿಧ್ಯ ಲಭಿಸಿಲ್ಲ. ಕೆಲವು ಮಾನದಂಡಗಳನ್ನು ಅನುಸರಿಸುವಾಗ ಕೆಲವು ಜಿಲ್ಲೆಗಳಿಗೆ ಪ್ರಾತಿನಿಧ್ಯ ದೊರೆತಿಲ್ಲ. ಉದಾಹರಣೆಗೆ ಕೊಡಗು ಜಿಲ್ಲೆಯಲ್ಲಿ ಇಬ್ಬರೂ ಮೊದಲ ಬಾರಿ ಶಾಸಕರಾಗಿದ್ದಾರೆ. ಹಾಗಾಗಿ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಲು ಸಾಧ್ಯವಾಗಿಲ್ಲ ಎಂದು ಹೇಳಿದರು. ಪುಟ್ಟರಂಗಶೆಟ್ಟಿ ಅವರು ವಿಧಾನ ಸಭೆಯ ಉಪಾಧ್ಯಕ್ಷ ಹುದ್ದೆಯನ್ನು ಒಪ್ಪಿಕೊಂಡಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಅಸಮಾಧಾನ, ಸಮಾಧಾನ ಯಾವಾಗಲೂ ಇರುತ್ತದೆ. ಅಸಮಾಧಾನದಲ್ಲಿ ಸಮಾಧಾನವಿರುತ್ತದೆ. ಅವರೊಂದಿಗೆ ನಾನು ನಿನ್ನೆ ರಾತ್ರಿಯೇ ಮಾತನಾಡಿದ್ದೇನೆ. ಅವರು ಒಪ್ಪಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದರು.