Advertisement

ಮಾದರಿ ಜಿಲ್ಲೆಗೆ ಸರ್ಕಾರಿ ನೌಕರರು ಶ್ರಮ

06:28 PM Apr 22, 2022 | Team Udayavani |

ಚಿಕ್ಕಬಳ್ಳಾಪುರ: ಸರ್ಕಾರಿ ಉದ್ಯೋಗ ಪಡೆದಿರುವ ನಾವೆಲ್ಲರೂ ಪುಣ್ಯವಂತರು. ಚಿಕ್ಕಬಳ್ಳಾಪುರ ಜಿಲ್ಲೆ ಮಾದರಿ ಮಾಡಲು ಸರ್ಕಾರಿ ನೌಕರರು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ಧಿಕಾರಿ ಆರ್‌.ಲತಾ ಹರ್ಷ ವ್ಯಕ್ತಪಡಿಸಿದರು.

Advertisement

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಮತ್ತು ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ಜನಪ್ರತಿನಿಧಿಗಳ ಸಹಕಾರದಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಾಗುತ್ತಿವೆ.ಅದು ಗ್ರಾಪಂ ಅಧ್ಯಕ್ಷರು, ಸದಸ್ಯರಿಂದ ಹಿಡಿದು ಶಾಸಕರು, ಸಚಿವರು ಸಹಕಾರದಿಂದ ಜಿಲ್ಲೆಯೂ ಪ್ರತಿಯೊಂದರಲ್ಲೂ
ಅಗ್ರಸ್ಥಾನ ಪಡೆಯುತ್ತಿರುವುದು ಸಂತಸ ತಂದಿದೆ ಎಂದು ವಿವರಿಸಿದರು.

ಸಂಕಷ್ಟದಲ್ಲಿ ಉತ್ತಮ ಸೇವೆ: ಕೊರೊನಾ ಸೋಂಕು, ಅತಿವೃಷ್ಟಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಸಂಕಷ್ಟಕ್ಕೆ ಸಿಲುಕಿದ್ದ ಸಮಯದಲ್ಲಿ ವೈದ್ಯರು, ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪೌರ ಕಾರ್ಮಿಕರು, ಕೃಷಿ, ತೋಟಗಾರಿಕೆ, ಮುಖ್ಯವಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಎಲ್ಲಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ, ರೈತರ ಹಿತದೃಷ್ಟಿಗೆ ಸಾಕಷ್ಟು ಶ್ರಮವಹಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.

ಕಾಲುವೆ ಅಭಿವೃದ್ಧಿ, ನಿವೇಶನ ಹಂಚಿಕೆ: ಜಿಪಂನಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ 713 ಕಿ. ಮೀ. ಕಾಲುವೆ ಅಭಿವೃದ್ಧಿ ಮಾಡಲಾಗಿದೆ. ಜೊತೆಗೆ ಕಂದಾಯ ಇಲಾಖೆಯಿಂದ ನಿವೇಶನ ರಹಿತರಿಗೆ 45 ಸಾವಿರ ನಿವೇಶನ ಕಲ್ಪಿಸಿರುವುದು ಉತ್ತಮ ಕಾರ್ಯ ವಾಗಿದೆ. ಇದರಿಂದ ಜಿಲ್ಲೆಯು ಮತ್ತಷ್ಟು ಅಭಿವೃದ್ಧಿದತ್ತ ಸಾಗುತ್ತಿರುವುದು ಹೆಮ್ಮೆಯಾಗಿದೆ ಎಂದರು.

ಸಕಾಲದಲ್ಲಿ ಉತ್ತಮ ಸಾಧನೆ: ಸಕಾಲ ಯೋಜನೆಯ ಅನುಷ್ಠಾನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ಮುಂಚೂಣಿಯಲ್ಲಿದ್ದು, ರಾಜ್ಯದಲ್ಲಿ 49 ಬಾರಿ ಪ್ರಥಮ ಸ್ಥಾನ ಪಡೆದಿದೆ. ಸರ್ಕಾರದಿಂದ 5 ಬಾರಿ ಅತ್ಯುತ್ತಮ ಸಾಧನೆಯ ಪ್ರಶಂಸಾ ಪತ್ರ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ. ಪ್ರಸ್ತುತ ಪ್ರಥಮ, ದ್ವಿತೀಯ ಶ್ರೇಯಾಂಕದಲ್ಲಿಯೇ ತನ್ನ ಸ್ಥಾನವನ್ನು ಕಾಪಾಡಿಕೊಂಡು ಜನರಿಗೆ ನಿರ್ದಿಷ್ಟ ಅವಧಿಯಲ್ಲಿ ನಿಯಮಾನುಸಾರ ಸಕಾಲ ಸೇವೆಗಳನ್ನು ಒದಗಿಸುತ್ತಿದೆ. ಇದಕ್ಕೆ ಸಹಕರಿಸಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಕಾಲ ಸಿಬ್ಬಂದಿಗೆ ಅಭಿನಂದನೆ ತಿಳಿಸಿದರು.

Advertisement

ನೌಕರರ ಭವನ ನಿರ್ಮಾಣಕ್ಕೆ ಮನವಿ: ಸರ್ಕಾರಿ ನೌಕರರ ಭವನ ನಿರ್ಮಾಣಕ್ಕಾಗಿ ಜಿಲ್ಲೆಯಲ್ಲಿ ಸ್ಥಳವನ್ನು ನೀಡಬೇಕೆಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಹರೀಶ್‌ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಹರೀಶ್‌ ಪ್ರಸ್ತಾವಿಕ ನುಡಿಗಳನ್ನಾಡಿದರು. ಸಂಪನ್ಮೂಲ ವ್ಯಕ್ತಿ ಹಾಗೂ ನಿವೃತ್ತ ತಹಶೀಲ್ದಾರ್‌ ಎಸ್‌.ದ್ವಾರಕನಾಥ್‌ ಅವರು ವಿಶೇಷ ಉಪನ್ಯಾಸ ನೀಡಿದರು, ಸರ್ಕಾರಿ ನೌಕರರಾಗಿ ಉತ್ತಮ ಸೇವೆ ಸಲ್ಲಿಸಿದ ಜಿಲ್ಲೆಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್‌, ಅಪರ ಜಿಲ್ಲಾ ಧಿಕಾರಿ ಎಚ್‌.ಅಮರೇಶ್‌, ಉಪವಿಭಾಗಾಧಿಕಾರಿ ಸಂತೋಷ್‌ಕುಮಾರ್‌, ಡಿವೈಎಸ್‌ಪಿ ವಾಸುದೇವ್‌, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಎಲ್ಲಾ ಸರ್ಕಾರಿ ನೌಕರರರು, ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next