Advertisement

ಹ್ಯಾಟ್ರಿಕ್‌ ಹೀರೋ ಆಗಲಿದ್ದಾರೆ ಬಿಎಸ್‌ವೈ

10:31 AM Dec 09, 2017 | Team Udayavani |

ಚಿಂಚೋಳಿ: ರಾಜ್ಯದಲ್ಲಿ ಬರುವ 2018 ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನದಲ್ಲಿ ಜಯಗಳಿಸುವ
ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮತ್ತೇ ಮುಖ್ಯಮಂತ್ರಿಗಳಾಗಿ 3ನೇ ಬಾರಿಗೆ ಹ್ಯಾಟ್ರಿಕ್‌ ಹೀರೋ ಆಗಲಿದ್ದಾರೆಂದು ಕೇಂದ್ರ ಸಚಿವ ಅನಂತಕುಮಾರ ಹೇಳಿದರು.

Advertisement

ಪಟ್ಟಣದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಶುಕ್ರವಾರ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಅಧಿ ಕಾರಕ್ಕೆ ಬಂದು ತನ್ನ ಅಧಿಕಾರ ಪೂರ್ಣಗೊಳಿಸುತ್ತಿದೆ. ಆದರೆ ಚಿಂಚೋಳಿ-ದೇಗಲಮಡಿ ರಾಜ್ಯ ಹೆದ್ದಾರಿ ರಸ್ತೆ ಇನ್ನು ಸುಧಾರಣೆ ಆಗಲಿಲ್ಲ. ಕಾಂಗ್ರೆಸ್‌ ಶಾಸಕ ಡಾ| ಉಮೇಶ ಜಾಧವ್‌ ಶಾಸಕರಾಗಿ ಅಭಿವೃದ್ಧಿಪಡಿಸುತ್ತಿಲ್ಲ. ಅವರು ಕಲೆಕ್ಷಷನ್‌ ಮಾಡುತ್ತಿದ್ದಾರೆಂದು ಟೀಕಿಸಿದರು.

ತಾಲೂಕಿನಲ್ಲಿ ನಡೆಯುತ್ತಿರುವ ಕೆಳದಂಡೆ ಮುಲ್ಲಾಮಾರಿ ಯೋಜನೆ ಕಾಮಗಾರಿಗಳಲ್ಲಿ ರಸ್ತೆ,ಚರಂಡಿ, ದವಾಖಾನೆ, ಶೌಚಾಲಯಗಳಲ್ಲಿ ಸ್ವತ್ಛ ಕಲೆಕ್ಷಶನ್‌ ನಡೆಯುತ್ತಿದೆ. ಅಭಿವೃದ್ದಿ ಎಂಬುದೇ ನಡೆಯುತ್ತಿಲ್ಲ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರ ಭಸ್ಮಾಸುರ ಕಂಪನಿ. ಎಲ್ಲಿ ಕೈ ಇಡತಾರೋ ಅಲ್ಲಿ ಬೂದಿ ಆಗುತ್ತದೆ. ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಯಾತ್ರೆ ಮಧ್ಯದಲ್ಲಿಯೇ ಠುಸ್‌ ಆಯಿತು. ಇನ್ನು ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ ಮಧ್ಯೆ ಭಿನ್ನಮತ ಇರುವುದರಿಂದರಿ ಎತ್ತು ಏರಿಗೆ ಎಳೆದರೆ ಕೋಣ ನೀರಿಗೆ ಎಳೆಯಿತು ಎಂಬಂತಾಗಿದೆ ಸ್ಥಿತಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪರಮೇಶ್ವರ ಮಧ್ಯೆ ನಾನೊಂದು ತೀರಾ ನೀನೊಂದು ತೀರಾ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವ್ಯಂಗ್ಯವಾಡಿದರು. 

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ರಾಜ್ಯದ 224 ವಿಧಾನಸಭಾ ಮತಕ್ಷೇತ್ರಗಳಲ್ಲಿ ಪ್ರವಾಸ ಮಾಡುವ ಮೂಲಕ ಇತಿಹಾಸ ನಿರ್ಮಿಸುತ್ತಿದ್ದಾರೆ. ಅಲ್ಲದೇ 650ಕೋಟಿ ಜನರ ಭಾವನೆಗಳನ್ನು ಅರಿತುಕೊಳ್ಳುತ್ತಿದ್ದಾರೆ. ಅವರು ರೈತರ ಪರವಾಗಿ ಪ್ರತ್ಯೇಕ ಬಜೆಟ್‌ ಮಂಡಿಸಿದ್ದಾರೆ. ಪ್ರಧಾನಮಂತ್ರಿ ಹಿಂದುಳಿದ ವರ್ಗದವರಾಗಿರುವುದರಿಂದ ಇಂದು ಹಿಂದುಳಿದ ವರ್ಗಕ್ಕೆ ಸೇರಿದ ರಾಮನಾಥ ಕೋವಿಂದ ಅವರಿಗೆ ರಾಷ್ಟ್ರಪತಿ ಹುದ್ದೆ ನೀಡಿ ಗೌರವಿಸಿದ್ದಾರೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next