Advertisement

ಕಾವೇರಿ ಕಣಿವೆಯಲ್ಲಿ ಭಾರೀ ಮಳೆ ಸಾಧ್ಯತೆ

06:00 AM May 23, 2018 | Team Udayavani |

ಬೆಂಗಳೂರು/ಮೈಸೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಾಣಿಸಿಕೊಂಡಿರುವುದರಿಂದ ಕಾವೇರಿ ಕಣಿವೆಯ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣದಿಂದ ಕೂಡಿದ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಮೇ 23ರಿಂದ 27ರವರೆಗೆ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್‌ 5ರಂದು ಕರ್ನಾಟಕಕ್ಕೆ ನೈಋತ್ಯ ಮುಂಗಾರು ಆಗಮನವಾಗಲಿದೆ. ಈ ವರ್ಷ ರಾಜ್ಯದಲ್ಲಿ ನೈಋತ್ಯ ಮುಂಗಾರು ಸಹಜವಾಗಿದ್ದು, ಜೂನ್‌ ತಿಂಗಳಿನಿಂದ
ಸೆಪ್ಟೆಂಬರ್‌ವರೆಗೆ ಶೇ.97ರಷ್ಟು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂಲಗಳನ್ನು ಉಲ್ಲೇಖೀಸಿ ನಾಗನಹಳ್ಳಿ ಗ್ರಾಮೀಣ ಕೃಷಿ ಹವಾಮಾನ ಸೇವಾ ವಿಭಾಗದ ಹಿರಿಯ ಕ್ಷೇತ್ರ ಅಧೀಕ್ಷಕ ಪಿ.ಪ್ರಕಾಶ್‌ ತಿಳಿಸಿದ್ದಾರೆ.

ಈ ಮಧ್ಯೆ, ಬಳ್ಳಾರಿ ಜಿಲ್ಲೆಯ ಹಲವೆಡೆ ಭಾರೀ ಮಳೆಗೆ ವಿದ್ಯುತ್‌ ಕಂಬ, ಮರಗಳು ನೆಲಕ್ಕುರುಳಿವೆ. ಇದೇ ವೇಳೆ, ರಾಜಧಾನಿ ಬೆಂಗಳೂರು, ಮಂಗಳೂರು, ಸಿದ್ದಾಪುರ, ಶಿರಸಿ ಸೇರಿ ರಾಜ್ಯದ ಹಲವೆಡೆ ಮಂಗಳವಾರವೂ ಮಳೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next