ಎಂಬ ವೈದ್ಯಕೀಯ ಅಭಿಪ್ರಾಯದ ಹಿನ್ನೆಲೆಯಲ್ಲಿ ಸಂತ್ರಸ್ತೆಯ ಮನವಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
Advertisement
ಮದುವೆ ಆಗುವುದಾಗಿ ಪುಸಲಾಯಿಸಿ ಯುವಕನೊಬ್ಬ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಘಟನೆ ಬಳಿಕ ಮಕ್ಕಳ ಕಲ್ಯಾಣ ಸಮಿತಿ ಮೂಲಕ ಬಾಲಕಿಯರ ಪೋಷಣಾ ಮಂದಿರಕ್ಕೆ ಸೇರಿಸಲಾಗಿತ್ತು. ಕೆಲ ದಿನಗಳ ಬಳಿಕ ಗರ್ಭ ಧರಿಸಿರುವುದು ಗೊತ್ತಾಯಿತು. ಆಗ ಆಕೆಯನ್ನು ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಿದ ಮಕ್ಕಳ ಕಲ್ಯಾಣ ಸಮಿತಿ, ಗರ್ಭಪಾತ ಮಾಡಿಸುವಂತೆ ವೈದ್ಯರಿಗೆ ಕೋರಿಕೆ ಸಲ್ಲಿಸಿತ್ತು. ಆದರೆ, ಈಗಾಗಲೇ ಗರ್ಭ ನಿಂತು 20 ವಾರ ಆಗಿದೆ. ಇಂತಹ ಸಂದರ್ಭದಲ್ಲಿ ಗರ್ಭಪಾತ ಮಾಡಿದರೆ ಜೀವಕ್ಕೆ ಅಪಾಯ. ಹಾಗಾಗಿ, ಗರ್ಭಪಾತ ಸಾಧ್ಯವಿಲ್ಲ ಎಂದು ವೈದ್ಯರು ಶಿಫಾರಸ್ಸು ಮಾಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೊರೆ ಹೋದ ಸಂತ್ರಸ್ತೆ, ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದಳು. ಈ ಬಗ್ಗೆ ಎಂ.ಎಸ್. ರಾಮಯ್ಯ ಆಸ್ಪತ್ರೆಯ ವೈದ್ಯರಿಂದ ವೈದ್ಯಕೀಯ ಅಭಿಪ್ರಾಯ ಪಡೆದುಕೊಳ್ಳುವಂತೆ ಹೈಕೋರ್ಟ್ ಸರ್ಕಾರಿ ವಕೀಲರಿಗೆ ಸೂಚನೆ ನೀಡಿತ್ತು. ಈ ಮಧ್ಯೆ, ಸಂತ್ರಸ್ತೆಯ ಹೇಳಿಕೆ ಆಧರಿಸಿ ಗರ್ಭಪಾತ ಮಾಡಿಸಬಹುದು ಎಂದು ನ್ಯಾಯಾಧೀಶರು ಅಭಿಪ್ರಾಯ ವ್ಯಕ್ತಪಡಿಸಿದ್ದರಾದರೂ, ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪಿಸಿದ್ದರು.