Advertisement

ರಾಘವೇಶ್ವರ ಶ್ರೀ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

06:55 AM Dec 07, 2018 | |

ಬೆಂಗಳೂರು: ಶ್ಯಾಮ ಶಾಸ್ತ್ರಿ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರಾಪುರ ಮಠದ ರಾಘವೇಶ್ವರ
ಭಾರತೀ ಸ್ವಾಮೀಜಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಿಜೆಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್‌ ಗುರುವಾರ ತಡೆಯಾಜ್ಞೆ ನೀಡಿದೆ.

Advertisement

ಪ್ರಕರಣ ರದ್ದು ಹಾಗೂ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ನ್ಯಾ.ಅಶೋಕ್‌ ನಿಜಗಣ್ಣನವರ್‌, ಅರ್ಜಿಯ ಮುಂದಿನ ವಿಚಾರಣೆವರೆಗೆ ಪುತ್ತೂರು ಸಿಜೆಎಂ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಿ, ವಿಚಾರಣೆಯನ್ನು 2019ರ ಜ.10ಕ್ಕೆ ಮುಂದೂಡಿದರು. ವಿಚಾರಣೆ ವೇಳೆ,ಸ್ವಾಮೀಜಿ ಪರ ವಕೀಲ ಪಿ.ಎನ್‌. ಮನಮೋಹನ್‌ ವಾದ ಮಂಡಿಸಿ, ಕಾನೂನು ಪ್ರಕಾರ ಅಪರಾಧ ಅಥವಾ ಘಟನೆ ಸಂಭವಿಸಿದ ಪೊಲೀಸ್‌ ಠಾಣೆ ವ್ಯಾಪ್ತಿಯ ಉಸ್ತುವಾರಿ ಠಾಣಾಧಿಕಾರಿಯ ವರದಿ ಆಧರಿಸಿ ಮಾತ್ರ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸ ಬಹುದು. ಆದರೆ, ಈ ಪ್ರಕರಣದಲ್ಲಿ ಠಾಣಾಧಿಕಾರಿ ಚಾರ್ಜ್‌ ಶೀಟ್‌ ಸಲ್ಲಿಸಿಲ್ಲ, ಬದಲಿಗೆ ಸಿಐಡಿ ಪೊಲೀಸರು ಸಲ್ಲಿಸಿದ್ದಾರೆ.

ಈ ಪ್ರಕರಣದಲ್ಲಿ ಸಿಐಡಿ ಸಂಬಂಧಪಟ್ಟ ಪೊಲೀಸ್‌ ಠಾಣೆಯ ಉಸ್ತುವಾರಿ ಠಾಣಾಧಿಕಾರಿ ಅಲ್ಲ. ಹಾಗಾಗಿ, ಸ್ವಾಮೀಜಿ ವಿರುದ್ಧ ದೂರು ದಾಖಲಿಸಿಕೊಳ್ಳಲು ಹೇಳಿದ ಮತ್ತು ವಿಚಾರಣೆ ಮುಂದುವರಿಸುತ್ತಿರುವ ಸಿಜೆಎಂ ನ್ಯಾಯಾಲಯದ ಕ್ರಮ ಲೋಪದಿಂದ ಕೂಡಿದೆ. ಆದ್ದರಿಂದ ಎಫ್ಐಆರ್‌, ಚಾರ್ಜ್‌ಶೀಟ್‌ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆ ಎಲ್ಲವೂ ರದ್ದುಪಡಿಸಬೇಕೆಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ, ಸ್ವಾಮೀಜಿ ವಿರುದ್ಧದ ವಿಚಾರಣೆಗೆ ತಡೆ ನೀಡಿ ಆದೇಶಿಸಿತು

Advertisement

Udayavani is now on Telegram. Click here to join our channel and stay updated with the latest news.

Next