Advertisement

ಅಪಹರಣ ಯತ್ನದಲ್ಲಿ ಸಂತೋಷ್‌ ಭಾಗಿ ದಾಖಲೆ ನೀಡಲು ಹೈಕೋರ್ಟ್‌ ಸೂಚನೆ

11:33 AM Nov 15, 2017 | Team Udayavani |

ಬೆಂಗಳೂರು: ವಿನಯ್‌ ಅಪಹರಣ ಯತ್ನ ಹಾಗೂ ಹಲ್ಲೆ ಪ್ರಕರಣದಲ್ಲಿ ಎನ್‌.ಆರ್‌ ಸಂತೋಷ್‌ ಭಾಗಿಯಾಗಿದ್ದಾರೆ ಎಂಬುದಕ್ಕೆ ಪೂರಕದಾಖಲೆಗಳನ್ನು ಸಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್‌ ಸೂಚಿಸಿದೆ. ಈ ಸಂಬಂಧ ಎಫ್ಐಆರ್‌ ರದ್ದುಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಆಪ್ತ ಸಹಾಯಕ ಸಂತೋಷ್‌ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ನ್ಯಾಯಮೂರ್ತಿ ಕೆ.ಎನ್‌ ಫ‌ಣೀಂದ್ರ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

Advertisement

ಈ ಪ್ರಕರಣದ ಆರೋಪಿಯೊಬ್ಬರು ನೀಡಿದ ಹೇಳಿಕೆ ಆಧರಿಸಿ ಅರ್ಜಿದಾರರ ವಿರುದ್ಧ ಪೊಲೀಸರು ಎಫ್ಐಆರ್‌ ದಾಖಲಿಸಿಕೊಂಡಿದ್ದಾರೆ. ಆದರೆ , ಆರೋಪಿ ಹೇಳಿಕೆ ಹೊರತುಪಡಿಸಿ ಅರ್ಜಿದಾರರು ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವ ಸಾಕ್ಷ್ಯಗಳನ್ನು ಕಲೆಹಾಕಲಾಗಿದೆ. ಅರ್ಜಿದಾರರೇ ನೇರವಾಗಿ ಭಾಗಿಯಾಗಿದ್ದಾರೆ ಎಂಬುದಕ್ಕಿರುವ ಪೂರಕ ದಾಖಲೆಗಳನ್ನು ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶಿಸಿ ನ. 17ಕ್ಕೆ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಪ್ರಾಸಿಕ್ಯೂಶನ್‌ ಪರ ವಕೀಲರು ವಾದಿಸಿ, ವಿನಯ್‌ ಅಪಹರಣ ಯತ್ನ ಹಾಗೂ ಹಲ್ಲೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಪ್ರಶಾಂತ್‌, ವಿನಯ್‌ರನ್ನು ಅಪಹರಿಸಿ ಹಲ್ಲೆ ಮಾಡಿ ಆತನ ಬಳಿಯಿರುವ ಲ್ಯಾಪ್‌ಟಾಪ್‌ ಸೇರಿದಂತೆ ಮತ್ತಿತರ ವಸ್ತುಗಳನ್ನು ತರಲು ಸಂತೋಷ್‌ ಹೇಳಿದ್ದರು.

ಹಲವು ದಿನಗಳಿಂದ ಸಂತೋಷ್‌ ಪರಿಚಯವಿದ್ದು ನೊಣವಿನಕೆರೆಯ ಮನೆಯಲ್ಲಿ ಭೇಟಿಯಾಗಿದ್ದೆವು. ಈ ಪ್ರಕರಣದಲ್ಲಿ ಪ್ರಮುಖ ಸೂತ್ರಧಾರ ಸಂತೋಷ್‌ ಎಂಬ ಹೇಳಿಕೆ ಆಧರಿಸಿ ಪೊಲೀಸರು ಹೆಚ್ಚಿನ ತನಿಖೆಗೆ ಸಂತೋಷ್‌ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next