Advertisement

ಸಿಐಡಿ ಕಾರ್ಯವೈಖರಿಗೆ ಹೈಕೋರ್ಟ್‌ ಬೇಸರ

06:46 AM Mar 13, 2019 | Team Udayavani |

ಬೆಂಗಳೂರು: ವಕೀಲೆ ಎಸ್‌.ಧರಣಿ ಆತ್ಮಹತ್ಯೆ ಪ್ರಕರಣದ ತನಿಖೆ ವಿಳಂಬವಾಗುತ್ತಿರುವುದಕ್ಕೆ ಮತ್ತೆ ಬೇಸರ ಹೊರಹಾಕಿರುವ ಹೈಕೋರ್ಟ್‌, ಪ್ರಕರಣದ “ಕೇಸ್‌ ಡೈರಿ’ ಸಲ್ಲಿಸುವಂತೆ ಸಿಐಡಿ ಪೊಲೀಸರಿಗೆ ಮಂಗಳವಾರ ನಿರ್ದೇಶನ ನೀಡಿದೆ.

Advertisement

ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಕೀಲರ ಸಂಘ ಸಲ್ಲಿಸಿರುವ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ. ಎಲ್‌. ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರಕರಣದ ತನಿಖೆ ವಿಚಾರವಾಗಿ ಸಿಐಡಿ ಪೊಲೀಸರ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿತು.

ಅರ್ಜಿ ವಿಚಾರಣೆ ವೇಳೆ, ಪ್ರಮಾಣಪತ್ರದೊಂದಿಗೆ ತನಿಖೆಯ ಪ್ರಗತಿಯ ವಿವರಣಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಿದ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌, ಕೃತ್ಯಕ್ಕೆ ಕಾರಣರಾದ ಆರೋಪಿಗಳ ಸುಳಿವು ಸಿಕ್ಕಿದೆ. ಪ್ರಕರಣದ ಸಂಬಂಧ ಮೂವರನ್ನು ಬಂಧಿಸಲಾಗಿದೆ.

ಕೆಲವರು ತಲೆ ಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಕ್ರಮ ಜರುಗಿಸಲಾಗಿದೆ ಎಂದರು. ಇದಕ್ಕೆ ಪೀಠ, ಸಿಐಡಿ ತನಿಖೆ ಮುನ್ನಾ ಏನೆಲ್ಲಾ ಆಗಿತ್ತು. ಬಳಿಕ ಏನೆಲ್ಲಾ ಬೆಳವಣಿಗೆಗಳು ನಡೆದಿವೆ. ಪ್ರಕರಣದ ಕೇಸ್‌ ಡೈರಿ ಸಲ್ಲಿಸಬೇಕು ಎಂದು ಸಿಐಡಿಗೆ ಆದೇಶಿಸಿ, ವಿಚಾರಣೆ ಮಾ.19ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next