Advertisement

ರಾಜ್ಯ ಸರ್ಕಾರದ ಧೋರಣೆಗೆ ಹೈಕೋರ್ಟ್‌ ಅಸಮಾಧಾನ 

07:00 AM Feb 08, 2018 | Team Udayavani |

ಬೆಂಗಳೂರು: ಆಗಸ್ಟ್‌- ಸೆಪ್ಟೆಂಬರ್‌ನಲ್ಲಿ ಚುನಾವಣೆ ನಡೆಸಬೇಕಾಗಿರುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ ಪುನರ್‌ವಿಂಗಡಣಾ ಹಾಗೂ ಮೀಸಲು ಕ್ಷೇತ್ರಗಳ ಅಂತಿಮ ಪಟ್ಟಿ ಸಲ್ಲಿಸದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಇದೀಗ ಹೈಕೋರ್ಟ್‌ ಮೆಟ್ಟಿಲೇರಿದೆ.

Advertisement

ರಾಜ್ಯದ 218 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದ ಕ್ಷೇತ್ರ ಪುನರ್‌ ವಿಂಗಡಣೆ ಹಾಗೂ ಮೀಸಲು ಕ್ಷೇತ್ರಗಳ ಅಂತಿಮ ಅಧಿಸೂಚನೆ ಹೊರಡಿಸುವ ಸಂಬಂಧ ಚುನಾವಣಾ ಆಯೋಗ ರಾಜ್ಯ ಸರ್ಕಾರದ ಜೊತೆ 3 ವರ್ಷಗಳಿಂದ ನಿರಂತರ ಚರ್ಚೆ ನಡೆಸಿದರೂ,ಇದುವರೆಗೂ ಪಟ್ಟಿ ಸಲ್ಲಿಸಿಲ್ಲ. ಕೇವಲ 198 ವಾರ್ಡ್‌ಗಳ ಪುನರ್‌ವಿಂಗಡಣೆ ಪಟ್ಟಿ ಮಾತ್ರ ನೀಡಿದ್ದು, 18 ವಾರ್ಡ್‌ಗಳ ಪಟ್ಟಿ ಹಾಗೂ 215 ಮೀಸಲು ವಾರ್ಡ್‌ಗಳ ಪಟ್ಟಿಯನ್ನು ಆಯೋಗಕ್ಕೆ ಸಲ್ಲಿಸಿಲ್ಲ. ಈ ಬಗ್ಗೆ ಅಂತಿಮಪಟ್ಟಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಚುನಾವಣಾ ಆಯೋಗ ಕೋರಿದೆ ಈ ಬಗ್ಗೆ ಬುಧವಾರ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ ರಮೇಶ್‌ಹಾಗೂ ನ್ಯಾಯಮೂರ್ತಿ ಪಿ.ಎಸ್‌. ದಿನೇಶ್‌ಕುಮಾರ್‌ ಅವರಿದ್ದ ವಿಭಾಗೀಯ ಪೀಠ, ರಾಜ್ಯ ಸರ್ಕಾರದ ವಿಳಂಬ ಧೋರಣೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ನೋಟಿಸ್‌ ಜಾರಿಗೊಳಿಸಿತು. ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next