Advertisement

ಉನ್ನತ ಶಿಕ್ಷಣ ಖಾತೆ ಸಮರ್ಥವಾಗಿ ನಿಭಾಯಿಸುವೆ: ಜಿ.ಟಿ.ದೇವೇಗೌಡ

06:35 AM Jun 23, 2018 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ನಂಬಿಕೆಯಿಟ್ಟು ಉನ್ನತ ಶಿಕ್ಷಣ ಇಲಾಖೆ ಜವಾಬ್ದಾರಿ ನೀಡಿದ್ದಾರೆ. ಇಲಾಖೆಯಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸುವೆ ಎಂದು ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ.

Advertisement

ನೂತನ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, “ನಾನು
ಗ್ರಾಮೀಣರೊಂದಿಗೆ ಬೆರೆಯುವ ಕಂದಾಯ ಅಥವಾ ಜಲ ಸಂಪನ್ಮೂಲ ಖಾತೆಗಳನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದೆ.

ಆ ಖಾತೆಗಳು ಕಾಂಗ್ರೆಸ್‌ ಬಳಿ ಹೋಗಿರುವುದರಿಂದ, ಉನ್ನತ ಶಿಕ್ಷಣ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಭರವಸೆಯಿಂದ ಈ ಖಾತೆ ನೀಡಿದ್ದಾರೆ’ ಎಂದು ತಿಳಿಸಿದರು.

ಗ್ರಾಮೀಣ ಭಾಗದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣ ಪಡೆಯಬೇಕು. ಇನ್‌ಫೋಸಿಸ್‌ ಮಾದರಿಯಲ್ಲಿ
ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಹೇಳಿದರು.

“8 ನೇ ತರಗತಿ ಓದಿರುವ ಜಿ.ಟಿ.ದೇವೇಗೌಡರು ಉನ್ನತ ಶಿಕ್ಷಣ ಇಲಾಖೆಯನ್ನು ಹೇಗೆ ನಿಭಾಯಿಸುತ್ತಾರೆ ಎಂದು
ಮಾಧ್ಯಮಗಳಲ್ಲಿ ವರದಿ ಬಂದಿತ್ತು. ನನ್ನ ತಂದೆ ತೀರಿಕೊಂಡಿದ್ದರಿಂದ ನಾನು ಮನೆಯ ಜವಾಬ್ದಾರಿ ಹೊತ್ತು ವ್ಯವಸಾಯ ಮಾಡಿದೆ. ಆದರೆ, ನಮ್ಮ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಿದ್ದೇನೆ. ಹೀಗಾಗಿ, ರಾಜ್ಯದ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೂ ಹೆಚ್ಚಿನ ಗಮನ ಹರಿಸುತ್ತೇನೆ’ ಎಂದು ಹೇಳಿದರು.

Advertisement

ಮೈಸೂರು ವಿವಿ ನಿವೃತ್ತ ಕುಲಪತಿ ಪ್ರೊ.ರಂಗಪ್ಪ ವಿದ್ವಾಂಸರಿದ್ದಾರೆ. ರಾಜ್ಯದಲ್ಲಿ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಎಲ್ಲ ಶಿಕ್ಷಣ ತಜ್ಞರ ಸಲಹೆ ಪಡೆದು ಕಾರ್ಯ ನಿರ್ವಹಿಸುತ್ತೇನೆ ಎಂದರು.

ಹೊರಟ್ಟಿ ಹಂಗಾಮಿ ಸಭಾಪತಿ
ಬೆಂಗಳೂರು
: ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ಹಿರಿಯ ಸದಸ್ಯ ಜೆಡಿಎಸ್‌ನ ಬಸವರಾಜ ಹೊರಟ್ಟಿ ಅವರನ್ನು ನೇಮಿಸಿರುವ ಕ್ರಮಕ್ಕೆ ಸಚಿವ ಸಂಪುಟ ಸಭೆ ಘಟನೋತ್ತರ ಅನುಮೋದನೆ ನೀಡಿದೆ.

ಸಭಾಪತಿಯಾಗಿದ್ದ ಶಂಕರಮೂರ್ತಿ ಅವರ ಅಧಿಕಾರಾವಧಿ ಕೊನೆಗೊಂಡಿದೆ. ಉಪಸಭಾಪತಿಯಾಗಿದ್ದ ಮರಿತಿಬ್ಬೇ ಗೌಡ ಅವರು ಅಧಿಕಾರಾವಧಿ ಕೊನೆಗೊಂಡು ಪುನರಾಯ್ಕೆಯಾಗಿದ್ದಾರೆ. ಇದರಿಂದಾಗಿ ಎರಡೂಸ್ಥಾನಗಳು ಖಾಲಿ ಉಳಿದಂತಾಗಿದ್ದು, ಈ ಹಿನ್ನೆಲೆಯಲ್ಲಿ ಬಸವರಾಜಹೊರಟ್ಟಿ ಅವರನ್ನು ಹಂಗಾಮಿ ಸಭಾಪತಿಯಾಗಿ ನೇಮಕ
ಮಾಡಲಾಗಿತ್ತು. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಘಟನೋತ್ತರ ಒಪ್ಪಿಗೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next