Advertisement

ದೆಹಲಿಯಲ್ಲೂ ಹಿಜಾಬ್ ವಿವಾದ : ಸ್ಪಷ್ಟನೆ ನೀಡಿದ ಡಿಸಿಎಂ ಸಿಸೋಡಿಯಾ

04:56 PM Feb 24, 2022 | Team Udayavani |

ನವದೆಹಲಿ: ದೆಹಲಿಯ ಸರಕಾರಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ತನ್ನ ಶಿಕ್ಷಕರು ಹಿಜಾಬ್ ತೆಗೆಯುವಂತೆ ಕೇಳಿಕೊಂಡಿದ್ದರು ಎಂದು ಆರೋಪಿಸಿದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಅಂತಹ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ ಮತ್ತು ಕೆಲವರು ಈ ವಿಷಯವನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಖಾತೆಯನ್ನು ಹೊಂದಿರುವ ಸಿಸೋಡಿಯಾ, ಎಎಪಿ ಎಲ್ಲಾ ಸಂಪ್ರದಾಯಗಳನ್ನು ಗೌರವಿಸುತ್ತದೆ ಮತ್ತು ಎಲ್ಲಾ ಧರ್ಮಗಳು ಮತ್ತು ಜಾತಿಗಳ ವಿದ್ಯಾರ್ಥಿಗಳನ್ನು ತನ್ನ ಶಾಲೆಗಳಲ್ಲಿ ಗೌರವದಿಂದ ನಡೆಸಿಕೊಳ್ಳಲಾಗುತ್ತದೆ ಎಂದು ಹೇಳಿದರು.

ಮುಸ್ತಫಾಬಾದ್‌ನ ದೆಹಲಿ ಸರ್ಕಾರಿ ಶಾಲೆಯೊಂದರ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯೊಬ್ಬಳು ಶಾಲೆಯಲ್ಲಿ ತನ್ನ ಸ್ಕಾರ್ಫ್ ಅನ್ನು ತೆಗೆದುಹಾಕಲು ಕೇಳಿಕೊಂಡಿದ್ದಾರೆ ಎಂದು ಆರೋಪಿಸಿದ ನಂತರ ಸಿಸೋಡಿಯಾ ಈ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬಾಲಕಿ ಈ ಆರೋಪ ಮಾಡಿದ್ದಾಳೆ.

ದೆಹಲಿ ಶಾಲೆಗಳು ವಿದ್ಯಾರ್ಥಿಗಳಿಗೆ ಕಲಿಸಲು ಅತ್ಯುತ್ತಮವಾದ ವ್ಯವಸ್ಥೆಯನ್ನು ಹೊಂದಿವೆ. ಈ ಘಟನೆಗೆ ಸಂಬಂಧಿಸಿದಂತೆ..ವಿಷಯವನ್ನು ರಾಜಕೀಯಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ನಮ್ಮ ಶಾಲೆಗಳಲ್ಲಿ ಎಲ್ಲ ಧರ್ಮ, ಜಾತಿಯ ವಿದ್ಯಾರ್ಥಿಗಳನ್ನು ಗೌರವದಿಂದ ಕಾಣಲಾಗುತ್ತಿದೆ. ನಮ್ಮ ಕಡೆಯಿಂದ ಯಾವುದೇ ನಿರ್ಬಂಧಗಳಿಲ್ಲ ಮತ್ತು ಅವರ ಸಂಪ್ರದಾಯಗಳನ್ನು ಗೌರವಿಸಲಾಗುತ್ತದೆ ಎಂದು ಸಿಸೋಡಿಯಾ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next