Advertisement

ಹಿಜಾಬ್‌-ಕೇಸರಿ ವಿವಾದ ತಡೆಗೆ ಮುಂದಾಗಿ

05:38 PM Feb 12, 2022 | Team Udayavani |

ಗಜೇಂದ್ರಗಡ: ರಾಜ್ಯಾದ್ಯಂತ ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ಕೋಮು ವಿಭಜನೆ ಉಂಟು ಮಾಡಿರುವ ಹಿಜಾಬ್‌-ಕೇಸರಿ ಶಾಲು ಅನಗತ್ಯ ವಿವಾದವನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸಿ ಸಿಪಿಐಎಂ ಪಕ್ಷದ ಪದಾಧಿ ಕಾರಿಗಳು ಪಟ್ಟಣದ ತಹಶೀಲ್ದಾರ್‌ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

Advertisement

ಸದ್ಯ ರಾಜ್ಯದಲ್ಲಿ ಎದ್ದಿರುವ ಈ ವಿವಾದಕ್ಕೆ ಸರಕಾರ ಹಾಗೂ ಕೋಮುವಾದಿ ಸಂಘಟನೆಗಳು ಕಾರಣಗಳಾಗಿವೆ. ರಾಜ್ಯ ಸರ್ಕಾರ ಇವುಗಳನ್ನು ಪೋಷಿಸುತ್ತಿರುವುದರಿಂದ ವಿದ್ಯಾರ್ಥಿಗಳ ನಡುವೆ ಉದ್ದೇಶ ಪೂರ್ವಕ ವಿಭಜನೆ ಸೃಷ್ಟಿಸಲಾಗುತ್ತಿದೆ.

ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗೆ ಶಿಕ್ಷಣ ನಿರಾಕರಿಸುವಂತಹ ಮತ್ತು ವಿದ್ಯಾರ್ಥಿ ಸಮುದಾಯವನ್ನು ಕೋಮುವಾದಿ ನೆಲೆಯಲ್ಲಿ ವಿಭಜನೆ ಮಾಡುವ ದುರುದ್ದೇಶದಿಂದ ಮುಸ್ಲಿಂ ವಿದ್ಯಾರ್ಥಿನಿಯರು ಧರಿಸುವ ತಲೆ ವಸ್ತ್ರಕ್ಕೆ ವಿರುದ್ಧವಾಗಿ ಕೇಸರಿ ಶಾಲು ಧರಿಸುವಂತೆ ಹಿಂದೂ ವಿದ್ಯಾರ್ಥಿಗಳನ್ನು ಎತ್ತಿಕಟ್ಟುವ ಕೆಲಸವನ್ನು ಕೆಲವು ಹಿಂದುತ್ವದ ಮತೀಯ ವಾದಿ ಸಂಘಟನೆಗಳು ಮಾಡುತ್ತಿವೆ ಎಂದು ಟೀಕಿಸಿದರು.

ಇನ್ನು ಮುಸ್ಲಿಂ ಅಲ್ಪಸಂಖ್ಯಾತರಲ್ಲಿ ಹಿಂದುತ್ವ ಕೋಮುವಾದಿಗಳು ಮತ್ತು ರಾಜ್ಯ ಸರ್ಕಾರ ಸೃಷ್ಟಿಸಿರುವ ಆತಂಕದ ಪರಿಸ್ಥಿತಿ ಬಳಸಿಕೊಂಡು ವಿದ್ಯಾರ್ಥಿಗಳನ್ನು ಮತ್ತು ಜನತೆಯನ್ನು ಕೋಮುವಾದಿ ನೆಲೆಯಲ್ಲಿ ಕ್ರೋಢೀಕರಿಸಲು ಕೆಲವು ಮತಾಂಧ ಸಂಘಟನೆಗಳು ಪ್ರಯತ್ನಿಸುತ್ತಿವೆ. ಇದರಿಂದ ಸಮಾಜದಲ್ಲಿ ಕೋಮು ಸೌಹಾರ್ಧತೆಗೆ ತೀವ್ರ ಧಕ್ಕೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರವೇ ಸಂವಿಧಾನ ವಿರೋಧಿಯಾದ ಮತಾಂಧತೆಗೆ ಕುಮ್ಮಕ್ಕು ನೀಡುವ ಕಾಯ್ದೆಗಳ ಪರ ಕ್ರಮ ವಹಿಸುವ ಮೂಲಕ ಮತಾಂಧ ಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದೆ. ಅಲ್ಲದೇ, ವಿದ್ಯಾರ್ಥಿಗಳ ನಡುವೆ ಕೋಮು ವಿಭಜನೆಯನ್ನು ತೀವ್ರಗೊಳಿಸುವ ಉದ್ದೇಶದಿಂದ ಕೆಲವು ಸಚಿವರು ಮತ್ತು ಶಾಸಕರು ಸೌಹಾರ್ಧತೆಗೆ ಭಂಗ ತರುವಂತಹ ಖಂಡನಾರ್ಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೂಡಲೇ ಸರ್ಕಾರ ಇವುಗಳನ್ನು ತಡೆಗಟ್ಟಲು ಮುಂದಾಗಬೇಕು ಎಂದು ಒತ್ತಾಯಿಸಿದರು.

Advertisement

ಇದೇ ಸಂದರ್ಭದಲ್ಲಿ ಗ್ರೇಡ್‌-2 ತಹಶೀಲ್ದಾರ್‌ ಎಂ.ಆರ್‌. ಷಣ್ಮುಖ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಎಂ.ಎಸ್‌. ಹಡಪದ, ಫಯಜ್‌ ತೋಟದ, ಮಾರುತಿ ಚಿಟಗಿ, ಪೀರು ರಾಠೊಡ, ಬಾಲು ರಾಠೊಡ, ಮೈಬುಸಾಬ ಹವಾಲ್ದಾರ್‌, ಚನ್ನಪ್ಪ ಗುಗಲೋತ್ತರ, ನಜೀರ ಮಾಲ್ದಾರ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next