Advertisement

ಗೃಹ ಇಲಾಖೆಗೆ ಸಲಹೆಗಾರರ ಅಗತ್ಯವಿಲ್ಲ,ಯಾವ ಗೊಂದಲವೂ ಇಲ್ಲ: ಎಚ್ ಡಿಕೆ

03:48 PM May 31, 2018 | Team Udayavani |

ಬೆಂಗಳೂರು: ಸಂಪುಟ ವಿಸ್ತರಣೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಪುನರುಚ್ಚರಿಸಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಗೃಹ ಇಲಾಖೆಗೆ ಸಲಹೆಗಾರರ ಅಗತ್ಯವಿಲ್ಲ. ನಮ್ಮ ಅಧಿಕಾರಿಗಳು ದಕ್ಷವಾಗಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

Advertisement

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಆಡಳಿತ ಯಂತ್ರ ವೇಗವಾಗಿ ನಡೆಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸಂಪುಟ ರಚನೆಗಿಂತ ಉತ್ತಮ ಆಡಳಿತ ನೀಡುವತ್ತ ಗಮನ ಹರಿಸಿದ್ದೇವೆ ಎಂದರು.

ಸಂಪುಟ ವಿಸ್ತರಣೆ ಕುರಿತಂತೆ ಕಾಂಗ್ರೆಸ್ ಜತೆ ಚರ್ಚಿಸಿ ನಾಳೆಯೇ ಅಂತಿಮ ತೀರ್ಮಾನ ಕೈಗೊಂಡು, ಜಂಟಿ ಸುದ್ದಿಗೋಷ್ಠಿಯಲ್ಲಿ ಎಲ್ಲ ಮಾಹಿತಿ ನೀಡುವುದಾಗಿ ಕುಮಾರಸ್ವಾಮಿ ಹೇಳಿದರು.

ಹಿಂದಿನ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಗೃಹ ಇಲಾಖೆಗೆ ಕೆಂಪಯ್ಯ ಅವರನ್ನು ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಅಲ್ಲದೇ ಕೆಂಪಯ್ಯ ಅವರ ವಿರುದ್ಧ ಬಿಜೆಪಿ, ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

Advertisement

Udayavani is now on Telegram. Click here to join our channel and stay updated with the latest news.

Next