Advertisement
– ರಾಜ್ಯದಲ್ಲಿ ಕೊರೊನಾ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಈ ಆದೇಶ ಹೊರಡಿಸಿದೆ.
ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಂಸ್ಥೆಗಳಿಗೂ ಈ ಆದೇಶ ಅನ್ವಯ ಆಗಲಿದೆ. ಇದನ್ನೂ ಓದಿ:ಮುಷ್ಕರ ಬಿಟ್ಟು ಬೋಧನೆಗೆ ಹಿಂದಿರುಗಿ : ಅತಿಥಿ ಉಪನ್ಯಾಸಕರಿಗೆ ಸಚಿವರ ಮನವಿ
Related Articles
ಕೋವಿಡ್-19 ಪರೀಕ್ಷೆಗೆ ಮಾದರಿ ಕೊಟ್ಟವರು ಫಲಿತಾಂಶ ಬರುವವರೆಗೆ ಐಸೋಲೇಶನ್ ಅಥವಾ ಹೋಮ್ ಕ್ವಾರಂಟೈನ್‌ನಲ್ಲೇ ಇರಬೇಕು. ನಿಯಮ ಉಲ್ಲಂ ಸಿ ಹೊರಬಂದರೆ ಕಾನೂನು ಕ್ರಮ ಜರಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಸಿದೆ. ಕೋವಿಡ್ ಪರೀಕ್ಷೆಗಾಗಿ ಮಾದರಿ ಕೊಟ್ಟವರಲ್ಲಿ ಸೋಂಕು ಇರುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪರೀಕ್ಷೆಗೆ ಮಾದರಿ ನೀಡಿ ಬೇಕಾಬಿಟ್ಟಿ ಅಡ್ಡಾಡಿದರೆ ಕಾನೂನು ಕ್ರಮ ಕೈಗೊಳ್ಳ ಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.
Advertisement
ಅನೇಕ ರೋಗಿಗಳು ಅಗತ್ಯವಿಲ್ಲದಿದ್ದರೂ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದನ್ನು ತಪ್ಪಿಸಿ ಅಗತ್ಯವಿರುವವರಿಗೆ ಹಾಸಿಗೆ ಒದಗಿಸಲು ವೈದ್ಯರ ಸಲಹೆ, ಮಾರ್ಗದರ್ಶನ ಅಗತ್ಯ. ದೂರವಾಣಿ ಕರೆ ಮಾರ್ಗದರ್ಶನ ನೀಡಿದರೆ, ಅನುಕೂಲವಾಗುತ್ತದೆ.–ಡಾ| ಸುಧಾಕರ್,
ಆರೋಗ್ಯ ಸಚಿವ