Advertisement

ಜಿಲ್ಲಾ ಸ್ವೀಪ್‌ ವತಿಯಿಂದ ಮತದಾರರ ಜಾಗೃತಿಗಾಗಿ ಮಾನವ ಸರಪಳಿ

04:25 PM Apr 07, 2018 | |

ಮಹಾನಗರ: ದ.ಕ. ಜಿಲ್ಲಾ ಸ್ವೀಪ್‌ ವತಿಯಿಂದ ಮತದಾರರ ಜಾಗೃತಿ ಅಂಗವಾಗಿ ಮನಪಾ ಕಚೇರಿ ಕಟ್ಟಡದ ಹೊರ ಆವರಣದಲ್ಲಿ ಆಯೋಜಿಸಲಾದ ಮಾನವ ಸರಪಳಿಯಲ್ಲಿ ನಗರದ ಕಾಲೇಜು ವಿದ್ಯಾರ್ಥಿಗಳ ಜತೆ ಮಂಗಳೂರು ಮಹಾನಗರ ಪಾಲಿಕೆಯ ಸಿಬಂದಿ ಹಾಗೂ ಅಧಿಕಾರಿಗಳು ಪಾಲ್ಗೊಂಡರು.

Advertisement

ದ.ಕ. ಜಿಲ್ಲಾ ಸ್ವೀಪ್‌ ಅಧ್ಯಕ್ಷ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಂ.ಆರ್‌. ರವಿ, ಮನಪಾ ಆಯುಕ್ತ ಮಹಮ್ಮದ್‌ ನಝೀರ್‌ ಉಪಸ್ಥಿತಿಯಲ್ಲಿ ಪ್ರತಿಜ್ಞಾ ವಿಧಿ ಬಳಿಕ ಮತದಾನದ ಮಹತ್ವವನ್ನು ಸಾರುವ ಭಿತ್ತಿ ಪತ್ರಗಳೊಂದಿಗೆ ಮಾನವ ಸರಪಳಿ ರಚಿಸಲಾಯಿತು.

ಇದೇ ವೇಳೆ ಸ್ವೀಪ್‌ ವತಿಯಿಂದ ನಗರದ ವಿವಿಧ ಕಡೆ ಸಂಚರಿಸುತ್ತಿರುವ ಪ್ರಚಾರ ವಾಹನದ ಮೂಲಕವೂ ಪ್ರಚಾರ ನಡೆಸಲಾಯಿತು. ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ| ಎಂ.ಆರ್‌. ರವಿ, ಮತದಾರರ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ನಗರದಲ್ಲಿ ವಿಶೇಷ ಮಾನವ ಸರಪಳಿ ನಡೆಸಲಾಗಿದೆ. ನಗರ ಪಾಲಿಕೆ ಉದ್ಯೋಗಿಗಳು, ವಿದ್ಯಾರ್ಥಿಗಳು ಸೇರಿದಂತೆ ಸುಮಾರು 500ರಷ್ಟು ಮಂದಿ ಭಾಗವಹಿಸಿದ್ದಾರೆ. ಯುವ ಮತದಾರರನ್ನು ಮತಗಟ್ಟೆಗೆ ಸೆಳೆಯುವ ಪ್ರಯತ್ನವಾಗಿ ಈ ಕಾರ್ಯಕ್ರಮ ನಡೆಸಲಾಗಿದೆ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next