Advertisement

Crime: ಪತ್ನಿಯನ್ನು ಕೊಂದಿದ್ದ ಪತಿ ಕೂಡ ಆತ್ಮಹತ್ಯೆಗೆ ಶರಣು

11:29 AM Aug 18, 2024 | Team Udayavani |

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಬೇಸತ್ತು ರಾಡ್‌ನಿಂದ ಹಲ್ಲೆ ನಡೆಸಿ ಪತ್ನಿಯನ್ನು ಕೊಲೆಗೈದಿದ್ದ ಪತಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Advertisement

ಹುಳಿಮಾವು ನಿವಾಸಿ ಮಹೇಶ್‌ ಕುಮಾರ್‌ (45) ಆತ್ಮಹತ್ಯೆಗೆ ಶರಣಾದವ.

ಮಹೇಶ್‌ ಕ್ರೇನ್‌ ಆಪರೇಟರ್‌ ಆಗಿ ಕೆಲಸ ಮಾಡುತ್ತಿದ್ದರೆ, ಈತನ ಪತ್ನಿ ಮೀನಾ ಹೌಸ್‌ಕೀಪಿಂಗ್‌ ಕೆಲಸ ಮಾಡುತ್ತಿದ್ದಳು. ಪತ್ನಿ ಮೀನಾ ಅಕ್ರಮ ಸಂಬಂಧ ಹೊಂದಿರುವ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಪತ್ನಿ ಮೀನಾಗೆ ಮಹೇಶ್‌ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ. ಶನಿವಾರ ಕಮ್ಮನಹಳ್ಳಿಯ ಖಾಲಿ ನಿವೇಶನದ ಬಳಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಹುಳಿಮಾವು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪತ್ನಿಯನ್ನು ಕೊಲೆ ಮಾಡಿದ ನೋವಿನಿಂದ ಬಳಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next