Advertisement

ಆದರ್ಶ ಗ್ರಾಮ ಅಂದ್ರೆ ಸೌಲಭ್ಯ ನೀಡಿಕೆಯಲ್ಲ: ಸಿದ್ದೇಶ್ವರ್‌

02:47 PM Sep 07, 2017 | Team Udayavani |

ದಾವಣಗೆರೆ: ಸಂಸದರ ಆದರ್ಶ ಗ್ರಾಮ ಯೋಜನೆ ಗ್ರಾಮಕ್ಕೆ ಬರೀ ಚರಂಡಿ, ರಸ್ತೆ ಮುಂತಾದ ಮೂಲ ಸೌಲಭ್ಯ ಒದಗಿಸುವುದಷ್ಟೇ ಅಲ್ಲ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಹೇಳಿದ್ದಾರೆ. 

Advertisement

ಸಂಸದರ ಆದರ್ಶ ಗ್ರಾಮ ಯೋಜನೆಗೆ ಆಯ್ಕೆಯಾಗಿರುವ ಚನ್ನಗಿರಿ ತಾಲೂಕು ಮಲ್ಲಾಪುರ ಗ್ರಾಮ ಪಂಚಾಯತ್‌ನಲ್ಲಿ ಬುಧವಾರ 52 ಲಕ್ಷ ರೂ. ಗಳ ವಿವಿಧ ಕಾಮಗಾರಿಗೆ ಚಾಲನೆ ನೀಡಿ, ಮಾತನಾಡಿದ ಅವರು, ಸಂಸದ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾದ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಮುಂತಾದ ಮೂಲ ಸೌಲಭ್ಯಗಳನ್ನು ಒದಗಿಸುವುದಷ್ಟೆ ಯೋಜನೆಯ ಉದ್ದೇಶವಲ್ಲ ಇದರ ಜೊತೆಗೆ ಗ್ರಾಮಗಳಲ್ಲಿ ಸಾಮಾಜಿಕ, ಆರ್ಥಿಕ, ಮತ್ತು ಸಾಂಸ್ಕೃತಿಕ ಬದಲಾವಣೆಯಾಗಬೇಕು. ಈ ರೀತಿ ಗ್ರಾಮಗಳ ಸಮಗ್ರ ಅಭಿವೃದ್ದಿಯಾದರೇ ಮಾತ್ರ ಸಂಸದ ಆದರ್ಶ ಗ್ರಾಮ ಯೋಜನೆಯ ಮೂಲ ಉದ್ದೇಶ ಸಾಕಾರಗೊಳ್ಳಲಿದೆ ಎಂದರು. ಕೇಂದ್ರ ಸರ್ಕಾರದ ಈ ಮಹಾತ್ವಾಕಾಂಕ್ಷೆಯ ಯೋಜನೆಗೆ ರಾಜ್ಯದಲ್ಲಿ ಆಡಳಿತದಲ್ಲಿರುವ ಪಕ್ಷವೂ ಕೂಡ ಕೈ ಜೋಡಿಸಬೇಕು. ಆದರೆ, ರಾಜ್ಯ ಸರ್ಕಾರದ ಇಚ್ಚಾಶಕ್ತಿ ಕೊರತೆ ಕಾರಣದಿಂದ ಆದರ್ಶಗ್ರಾಮ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣುತ್ತಿಲ್ಲ, ರಾಜ್ಯ ಸರ್ಕಾರ ಪ್ರಥಮ ಆದ್ಯತೆಯ ಮೇಲೆ ಸಂಸದ ಆದರ್ಶಗ್ರಾಮಗಳಿಗೆ  ವಸತಿ ಸೌಲಭ್ಯ ಕಲ್ಪಿಸಬೇಕು. ಆದರೆ ಈ ನಿಯಮವನ್ನು ರಾಜ್ಯ ಸರ್ಕಾರ ಪಾಲಿಸುತ್ತಿಲ್ಲ.  ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಬಯಸುತ್ತಿಲ್ಲ. ಬದಲಾಗಿ ಹೇಗಾದರೂ ಮಾಡಿ ಐದು ವರ್ಷ ಪೂರೈಸಿದರೆ ಸಾಕು ಎಂದು ಕಾಲಹರಣ ಮಾಡುತ್ತಿದೆ ಎಂದು ದೂರಿದರು. 

ಮಾಜಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷ ಕರಿಯಪ್ಪ,ತಾಲೂಕು ಪಂಚಾಯತಿ ಸದಸ್ಯ ಕೆಂಚಪ್ಪ, ಸಹಾಯಕ ಕಾರ್ಯಪಾಲಕ ಅಭಿಯಂತರ ಬಸವನಗೌಡ್ರು, ಗ್ರಾಪಂ ಅಭಿವೃದ್ಧಿ ಅಧಿಕಾರಿ ಶೇಖರಪ್ಪ ಇತರರು ವೇದಿಕೆಯಲ್ಲಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next