Advertisement
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಮಂಗಳವಾರ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಕಾರ್ಯದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
Related Articles
Advertisement
ಜಿ.ಪಂ.ಸಿಇಒ. ಕೆ.ಲಕ್ಷ್ಮೀಪ್ರಿಯ ಅವರು ಮಾತನಾಡಿ, ಭಾರತದಲ್ಲಿ ಹಲವಾರು ಶ್ರೇಷ್ಠ ಸಂತರು ಉತ್ತಮ ಮಾನವೀಯ ಮೌಲ್ಯವನ್ನು ತಿಳಿಸಿದ್ದಾರೆ. ಅವರ ಆದರ್ಶ ಜೀವನವನ್ನು ಜನರು ಅನುಕರಣೆ ಮಾಡುವ ಮೂಲಕ ಸಮಾಜದ ಏಳಿಗೆಗಾಗಿ ಶ್ರಮಿಸಬೇಕಾಗಿದೆ ಎಂದು ತಿಳಿಸಿದರು.
ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಎಚ್.ಎನ್.ವೆಂಕಟೇಶ್ ಅವರು ಮಾತನಾಡಿ , ಶಿವಶರಣ ಹಡಪದ ಅಪ್ಪಣ್ಣ ಅವರ ಜೀವನ ಚರಿತ್ರೆ ತಿಳಿದುಕೊಳ್ಳುವಂತಾಗಬೇಕು. ಸಮಾಜ ಅಭಿವೃದ್ಧಿ ಹೊಂದಲು ಮಕ್ಕಳು ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ, ಸವಿತಾ ಸಮಾಜದ ಜಿಲ್ಲಾ ಪ್ರತಿನಿಧಿ ಪುಟ್ಟರಾಜು, ಜಿ.ಪಂ.ಮುಖ್ಯಲೆಕ್ಕಾಧಿಕಾರಿ ನಂದ, ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ಸಹಾಯಕ ಕಾರ್ಯದರ್ಶಿ ಬಾಬು, ಲೋಕೋಪಯೋಗಿ ಇಲಾಖೆ ಇಇ ಇಬ್ರಾಹಿಂ, ಜಿಲ್ಲಾ ಐಟಿಡಿಪಿ ಇಲಾಖೆಯ ಅಧಿಕಾರಿ ಶಿವಕುಮಾರ್, ನಾನಾ ಇಲಾಖೆಯ ಅಧಿಕಾರಿಗಳು, ಸಿಬಂದಿಗಳು ಹಾಗೂ ಇತರರು ಹಾಜರಿದ್ದರು.
ಸತೀಶ್ ಮತ್ತು ಪಂಚಮ್ ಬೋಪಣ್ಣ ತಂಡದವರಿಂದ ವಚನ ಗಾಯನ ಕಾರ್ಯಕ್ರಮಗಳು ನಡೆದವು.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ ಅವರು ಸ್ವಾಗತಿಸಿದರು, ಎಚ್.ಜಿ.ಕುಮಾರ್ ನಿರೂಪಿಸಿದರು, ಮಣಜೂರು ಮಂಜುನಾಥ್ ಅವರು ವಂದಿಸಿದರು.
ಕಾಯಕ ನಿಷ್ಠೆದಾಸ ಸಂತರನ್ನು ಕೇವಲ ಒಂದು ವರ್ಗಕ್ಕೆ ಮಾತ್ರ ಸೀಮಿತಗೊಳಿಸಬಾರದು. ಬದಲಾಗಿ ಸಮಾಜದ ಎಲ್ಲ ಜನರು ಕೂಡ ಮಹಾನ್ ಸಂತರ ಆದರ್ಶ ಜೀವನ ಅಳವಡಿಸಿಕೊಳ್ಳಬೇಕು. ಮಾನವೀಯ ತತ್ವದ ನೆಲೆಯಲ್ಲಿ ಸಮಾಜದಲ್ಲಿ ಉತ್ತಮ ಕಾಯಕ ನಿಷ್ಠೆಯಿಂದ ಜೀವನ ಸಾಗಿಸಬೇಕಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಹೇಳಿದರು.