Advertisement

Parliament: ಸಂಸತ್‌ ಗೆ ನುಗ್ಗಿದ ಇಬ್ಬರ ಗುರುತು ಪತ್ತೆ; ಯಾರೀತ ಮೈಸೂರು ಮೂಲದ ಮನೋರಂಜನ್?

04:44 PM Dec 13, 2023 | Nagendra Trasi |

ನವದೆಹಲಿ/ಮೈಸೂರು: ಲೋಕಸಭಾ ಕಲಾಪದ ವೇಳೆ ಸಂಸತ್‌ ನೊಳಕ್ಕೆ ನುಗ್ಗಿದ ಇಬ್ಬರು ದುಷ್ಕರ್ಮಿಗಳ ಗುರುತು ಪತ್ತೆ ಹಚ್ಚಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಸಂಸತ್‌ ಭವನದ ಭದ್ರತಾ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.

Advertisement

ಸಂಸತ್ ನೊಳಕ್ಕೆ ನುಗ್ಗಿದ ಇಬ್ಬರು ಯುವಕರಲ್ಲಿ ಒಬ್ಬಾತ ಮೈಸೂರು ಮೂಲದ ಇಂಜಿನಿಯರಿಂಗ್‌ ವಿದ್ಯಾರ್ಥಿ ಮನೋರಂಜನ್‌ ಹಾಗೂ ಸಾಗರ್‌ ಶರ್ಮಾ ಎಂದು ಗುರುತಿಸಲಾಗಿದೆ.

ಮನೋರಂಜನ್‌ ತಂದೆ ಹೇಳೋದೇನು?

ಸಂಸತ್‌ ಭವನಕ್ಕೆ ನುಗ್ಗಿ ಗೊಂದಲ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿರುವ ಮನೋರಂಜನ್‌ ಮನೆಗೆ ಎಸಿಪಿ ಗಜೇಂದ್ರ ಪ್ರಸಾದ್‌, ವಿಜಯ್‌ ನಗರ ಇನ್ಸ್‌ ಪೆಕ್ಟರ್‌ ಸುರೇಶ್‌ ಭೇಟಿ ನೀಡಿ ಮನೋರಂಜನ್‌ ತಂದೆ ದೇವರಾಜೇಗೌಡ ಅವರಿಂದ ಮಾಹಿತಿ ಪಡೆದಿದ್ದಾರೆ.

“ನನ್ನ ಮಗ ಬಿಇ ಓದಿದ್ದು, ದೆಹಲಿ-ಬೆಂಗಳೂರು ಅಂತ ಓಡಾಡುತ್ತಿರುತ್ತಾನೆ. ಆದರೆ ಆತ ಎಲ್ಲಿದ್ದಾನೆ, ಏನು ಮಾಡುತ್ತಿದ್ದಾನೆ ಎಂಬುದು ಗೊತ್ತಿಲ್ಲ. ಮನೋರಂಜನ್‌ ಯಾವ ಪಕ್ಷದಲ್ಲೂ ಗುರುತಿಸಿಕೊಂಡಿಲ್ಲ. ಆತ 2014ರಲ್ಲಿ ಬಿಇ ಮುಗಿಸಿದ್ದ. ನಾನೊಬ್ಬ ರೈತ, ಆತ ಯಾಕಾಗಿ ಈ ರೀತಿ ಮಾಡಿದ್ದಾನೆ ಎಂಬುದು ಗೊತ್ತಿಲ್ಲ. ಆತ ತಪ್ಪು ಮಾಡಿದ್ದರೆ ಆತನನ್ನು ಗಲ್ಲಿಗೇರಿಸಲಿ ಎಂದು ತಂದೆ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಭದ್ರತಾ ಲೋಪದ ಪ್ರಕರಣದಲ್ಲಿ ಮೈಸೂರಿನ ಮನೋರಂಜನ್‌, ಸಾಗರ್‌ ಶರ್ಮಾ, ನೀಲಮ್‌ ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ.

ಸಂಸತ್‌ ಗೆ ನುಗ್ಗಿದ ಇಬ್ಬರು ಮೈಸೂರು ಮೂಲದವರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ವರದಿಯಾಗಿದೆ. ಇಬ್ಬರೂ ಸಂಸದ ಪ್ರತಾಪ್‌ ಸಿಂಹ ಅವರ ಹೆಸರಿನಲ್ಲಿ ಸಂಸತ್‌ ವೀಕ್ಷಕರ ಗ್ಯಾಲರಿ ಪಾಸ್‌ ಪಡೆದಿದ್ದಾರೆನ್ನಲಾಗಿದೆ.

ಭದ್ರತಾ ಲೋಪದ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ:

ಸಂಸತ್‌ ಭವನಕ್ಕೆ ಇಬ್ಬರು ದುಷ್ಕರ್ಮಿಗಳು ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಂಜೆ 4ಗಂಟೆಗೆ ಸರ್ವ ಪಕ್ಷ ಸಭೆಯನ್ನು ಕರೆದಿರುವುದಾಗಿ ವರದಿ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next