Advertisement
ನಗರದ ರಾಚೋಟೇಶ್ವರ ಪಪೂ ಕಾಲೇಜಿನಲ್ಲಿ ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 105ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
Related Articles
Advertisement
ನಿವೃತ್ತ ಶಿಕ್ಷಕ ಸಿ.ಎಸ್. ಮರಳಿಹಳ್ಳಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್ ಎಂ. ವಿಶ್ವೇಶ್ವರಯ್ಯನವರ ದೂರದರ್ಶಿತ್ವದ ಫಲವಾಗಿ ಸ್ಥಾಪನೆಯಾಗಿ, ಇಂದು ವಾಮನ ಮೂರ್ತಿಯಿಂದ ತ್ರಿವಿಕ್ರಮ ಸ್ವರೂಪವಾಗಿ ಬೆಳೆದು ನಿಂತಿದೆ. ಇಂಥ ಸಂಸ್ಥೆಗೆ ಕನ್ನಡಿಗರಾದ ನಾವು ಪ್ರತಿನಿಧಿಯಾಗಿ ಕಸಾಪದ ಚಟುವಟಿಕೆಗಳಿಗೆ ಸಹಾಯ ಸಹಕಾರ ನೀಡಬೇಕಾಗಿದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾ ಅಧ್ಯಕ್ಷ ಎಚ್.ಬಿ. ಲಿಂಗಯ್ಯ ಮಾತನಾಡಿ, ಜಿಲ್ಲಾ ಕಸಾಪವು ನಿರಂತರವಾಗಿ ಹಲವಾರು ಸಾಹಿತ್ಯಿಕ ಚಟುವಟಿಕೆ ಹಮ್ಮಿಕೊಳ್ಳುತ್ತಿದೆ. ಪ್ರತಿ ತಾಲೂಕಿನಲ್ಲಿ ನಾಡಹಬ್ಬ, ತಾಲೂಕು ಸಮ್ಮೇಳನ, ಜಿಲ್ಲಾ ಸಮ್ಮೇಳನಗಳು ನಡೆಯುತ್ತಿವೆ. ಸರ್ಕಾರವು ಆಂಗ್ಲ ಮಾಧ್ಯಮ ಶಾಲೆ ತೆರೆಯುವುದಕ್ಕೆ ಕಸಾಪವು ತೀವ್ರವಾಗಿ ಖಂಡಿಸಿದ್ದು, ಸದ್ಯದಲ್ಲೇ ಪ್ರತಿಭಟನೆ ಸಹ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಹುಕ್ಕೇರಿಮಠ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಕಸಾಪದ ಸಂಸ್ಥಾಪನಾ ದಿನಾಚರಣೆಯು ನಮ್ಮೆಲ್ಲರ ಆತ್ಮಾವಲೋಕನದ ಸಮಯವಾಗಿದ್ದು, ಕನ್ನಡನಾಡಿನಲ್ಲಿ ಕನ್ನಡವೇ ಕಳವಳಕಾರಿ ಸ್ಥಿತಿಯಲ್ಲಿದೆ. ನಮ್ಮನ್ನು ಆಳುವ ಜನಪ್ರತಿನಿಧಿಗಳು ಮತ್ತು ಕನ್ನಡದ ಸ್ವಾಮಿ ಸಂತರೆ ಆಂಗ್ಲ ಮಾಧ್ಯಮದ ಶಾಲೆಗಳನ್ನು ತೆಗೆದು ಶಿಕ್ಷಣವನ್ನು ವ್ಯಾಪಾರಿಕರಣಗೊಳಿಸಿದ್ದಾರೆ. ವೇದಿಕೆಯ ಮೇಲೆ ಕನ್ನಡದ ಬಗ್ಗೆ ಭಾಷಣ ಮಾಡುವ ಸಾಹಿತಿಗಳು, ಕನ್ನಡಪರ ಸಂಘಟನೆ ಸದಸ್ಯರು, ಕನ್ನಡ ಶಾಲೆಯ ಶಿಕ್ಷಕರೇ ತಮ್ಮ ಮಕ್ಕಳನ್ನು ಇಂಗ್ಲಿಷ್ ಮಾಧ್ಯಮದ ಶಾಲೆಗೆ ಸೇರಿದರೆ, ಕನ್ನಡ ಹೇಗೆ ಉಳಿದೀತು ಎಂದು ಪ್ರಶ್ನಿಸಿದರು.
ಇದೇ ಸಂದರ್ಭದಲ್ಲಿ ಸಾಹಿತ್ಯ ಶ್ರೀ ಪ್ರಶಸ್ತಿ ಪಡೆದ ಹಿರಿಯ ಬಂಡಾಯ ಸಾಹಿತಿ ಸತೀಶ ಕುಲಕರ್ಣಿ, ಇತ್ತೀಚಿಗೆ ಕನ್ನಡ ಸಾಹಿತ್ಯದಲ್ಲಿ ಡಾಕ್ಟರೆಟ್ ಪಡೆದ ಡಾ| ಪುಷ್ಪಾ ಶಲವಡಿಮಠ, ನಿವೃತ್ತ ಆರೋಗ್ಯ ನಿರೀಕ್ಷಕ ಶಂಕರ ಸುತಾರ, ಸಮಾಜ ಸೇವಕ ವಿವೇಕಾನಂದ ಬೆಂಡಿಗೇರಿ ಅವರನ್ನು ಕಸಾಪದ ವತಿಯಿಂದ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಹಿರಿಯ ಸಾಹಿತಿ ವಿರುಪಾಕ್ಷಪ್ಪ ಕೋರಗಲ್ಲ, ಪಿ.ಡಿ. ಶಿರೂರ, ಹನುಮಂತಗೌಡ ಗೊಲ್ಲರ, ಜಿ.ಎಂ. ಮಠದ, ಎಸ್.ವಿ. ಹಿರೇಮಠ, ವೈ.ಎಂ. ಬೇಲಿ, ದಾಕ್ಷಾಯಿಣಿ ಗಾಣಗೇರ, ಲಲಿತಾ ಹೊರಡಿ, ಅಮೃತಮ್ಮ ಶೀಲವಂತರ, ವಿ.ವಿ. ಹರಪನಹಳ್ಳಿ, ಎಸ್.ಎನ್. ದೊಡ್ಡಗೌಡರ, ಬಿ.ಪಿ. ಶಿಡೇನೂರ, ಪ್ರಭು ಹಿಟ್ನಳ್ಳಿ ಇದ್ದರು.