Advertisement
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಎಫ್ಎಂಕೆಎಂಸಿ ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತಾಶ್ರಯದಲ್ಲಿ ನಗರದ ಎಫ್ಎಂಕೆಎಂಸಿ ಕಾಲೇಜಿನಲ್ಲಿ ಮಂಗಳವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
Related Articles
Advertisement
ಪುತ್ತೂರಿನ ವಕೀಲರ ಸಂಘದ ಮಾಜಿ ಅಧ್ಯಕ್ಷ ಹಾಗೂ ವಿವೇಕಾನಂದ ಕಾನೂನು ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಕೆ.ಆರ್.ಆಚಾರ್ಯ ಅವರು ಮಾತನಾಡಿ ಸಂವಿಧಾನ ಪ್ರಸ್ತಾವನೆಯಲ್ಲಿ ಭಾರತದ ಪ್ರಜೆಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ ಗಣತಂತ್ರ ರಾಷ್ಟ್ರವೆಂದು ಹೇಳಲಾಗಿದೆ ಎಂದರು.
ಪ್ರತಿಯೊಬ್ಬರಲ್ಲಿಯೂ ಕಾನೂನಿನ ಪ್ರಜ್ಞೆ ಇರಬೇಕು. ಕಾನೂನು ಇಲ್ಲದ ಸಮಾಜ ಊಹಿಸಿಕೊಳ್ಳುವುದು ಅಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಸಂವಿಧಾನ ಪ್ರಸ್ತಾವನೆಯನ್ನು ತಿಳಿದುಕೊಳ್ಳಬೇಕು. ರಾಷ್ಟ್ರದ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ದೇಶದ ಸಂವಿಧಾನ ರಕ್ಷಣೆ ಮಾಡಿ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು ಎಂದರು.
ಎಫ್ಎಂಕೆಎಂಸಿ ಕಾಲೇಜಿನ ಪ್ರಾಂಶುಪಾಲ ಜಗತ್ ತಿಮ್ಮಯ್ಯ, ಜಿಲ್ಲಾ ಕಾನೂನು ಸೇವಾ ಪ್ರಾದಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ , ವಕೀಲರ ಸಂಘದ ಅಧ್ಯಕ್ಷ ಕೆ.ಎಸ್.ಕವನ್, ಅಖೀಲ ಭಾರತೀಯ ಅಧಿವಕ್ತ ಪರಿಷತ್‌ನ ಅಧ್ಯಕ್ಷ ಪಿ.ಕೃಷ್ಣಮೂರ್ತಿಉಪಸ್ಥಿತರಿದ್ದರು. ಸಾಕ್ಷತ್ ಕಾರ್ಯಕ್ರಮ ನಿರೂಪಿಸಿದರು, ಜಯಪ್ಪ ಸ್ವಾಗತಿಸಿ, ವಂದಿಸಿದರು.
ಪ್ರತಿಜ್ಞಾವಿಧಿಜಿಲ್ಲಾಡಳಿತ ವತಿಯಿಂದ ನಡೆದ ಸಂವಿಧಾನ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಭಾರತದ ಜನತೆ ಯಾದ ನಾವು, ಭಾರತ ವನ್ನು ಸಾರ್ವಭೌಮ, ಸಮಾಜ ವಾದಿ, ಧರ್ಮ ನಿರಪೇಕ್ಷ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ, ಭಾರತದ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯ, ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ದೊರೆಯುವಂತೆ ಮಾಡುವುದಕ್ಕಾಗಿ; ವ್ಯಕ್ತಿ ಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಬ್ರಾತೃತ್ವ ಭಾವನೆ ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಿ, ಸಂವಿಧಾನ ಸಭೆಯಲ್ಲಿ 1949ನೆಯ ಇಸವಿಯ ನವೆಂಬರ್ ತಿಂಗಳ 26ನೇ ದಿನದಂದು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡಿದ್ದೇವೆ ಎಂದು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.