Advertisement

ರಾಜೀವ ಗಾಂಧಿ ಸೇವಾ ಕೇಂದ್ರ ಉದ್ಘಾಟನೆ

04:44 PM Jun 27, 2020 | Suhan S |

ಗೋಕಾಕ: ಬಾಲಚಂದ್ರ ಜಾರಕಿಹೊಳಿ ಅವರಂತಹ ಹೃದಯಮಯಿ ಶಾಸಕರನ್ನು ಪಡೆದಿರುವುದು ಅರಭಾವಿ ಕ್ಷೇತ್ರದ ಜನರ ಪುಣ್ಯವೆಂದು ಶೂನ್ಯ ಸಂಪಾದನಮಠದ ಮುರುಘರಾಜೇಂದ್ರ ಸ್ವಾಮಿಗಳು ತಿಳಿಸಿದರು.

Advertisement

ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ನೂತನವಾಗಿ 16.25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ರಾಜೀವ ಗಾಂಧಿ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದರು. ಬಾಲಚಂದ್ರ ಜಾರಕಿಹೊಳಿ ಅವರು ಜನರು ಸಂಕಷ್ಟದಲ್ಲಿದ್ದಾಗ ಅದನ್ನು ಸಮರ್ಥವಾಗಿ ನಿಭಾಯಿಸಿ ಜನರಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ.

ಕೋವಿಡ್‌-19 ಸಮಯದಲ್ಲಿ ಕ್ಷೇತ್ರದ ಎಲ್ಲ ಜನರಿಗೂ ಆಹಾರ ಧಾನ್ಯಗಳ ಕಿಟ್‌, ಮಾಸ್ಕ್ ವಿತರಿಸಿರುವುದು ಮಾನವೀಯತೆಗೆ ಸಾಕ್ಷಿಯಾಗಿದೆ ಎಂದರು. ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಗ್ರಾಮ ಪಂಚಾಯತಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಶಾಸಕರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಳೆದ 15 ವರ್ಷಗಳಿಂದ ಅವಿರತವಾಗಿ ಶ್ರಮಿಸುತ್ತಿದ್ದಾರೆಂದು ತಿಳಿಸಿದರು.

ಮೆಳವಂಕಿ ಜಿಪಂ ಸದಸ್ಯೆ ಶಶಿಕಲಾ ಸಣ್ಣಕ್ಕಿ, ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಸಗೌಡ ಪಾಟೀಲ, ಗ್ರಾಪಂ ಅಧ್ಯಕ್ಷೆ ಶಕುಂತಲಾ ಕಾಪಶಿ, ತಾಪಂ ಸದಸ್ಯೆ ಬಾಳವ್ವ ಬಬಲಿ, ಪಿಕೆಪಿಎಸ್‌ ಅಧ್ಯಕ್ಷ ಭೀಮಪ್ಪ ಕಾಪಶಿ, ಮುಖಂಡರಾದ ಮಹಾದೇವ ಪತ್ತಾರ, ಸಿದ್ದಪ್ಪ ಹಂಜಿ, ಭೀಮಗೌಡ ಪಾಟೀಲ, ಅಡಿವೆಪ್ಪ ಮುತವಾಡ, ಅಲ್ಲಪ್ಪ ಕಂಕಣವಾಡಿ, ಈರಪ್ಪ ಬೀರನಗಡ್ಡಿ, ಯಲ್ಲವ್ವಾ ಶಿಂತ್ರಿ, ಗ್ರಾಪಂ ಸದಸ್ಯರು, ಪಿಡಿಓ ಯಲ್ಲಪ್ಪ ಮೂಡಲಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಅಂಕಲಗಿ ಮಠದ ಗುರುಸಿದ್ಧೇಶ್ವರ ಸ್ವಾಮಿಗಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next