Advertisement

ಇಂದು ಆಫ್ರಿಕಾ ಸರಣಿಗೆ ಭಾರತ ತಂಡ ಪ್ರಕಟ

12:13 PM Nov 27, 2017 | Team Udayavani |

ನಾಗ್ಪುರ: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಆಯ್ಕೆ ಸಮಿತಿ ಸೋಮವಾರ ಪ್ರಕಟಿಸಲಿದೆ.

Advertisement

ಇದೇ ವೇಳೆ ಲಂಕಾ ವಿರುದ್ಧದ ಮುಂದಿನ ಪಂದ್ಯಗಳಿಗೂ ಭಾರತ ತಂಡವನ್ನು ಪ್ರಕಟಿಸಲಾಗುತ್ತಿದೆ. ಶ್ರೀಲಂಕಾ ವಿರುದ್ಧದ ಮುಂದಿನ ಪಂದ್ಯಗಳಿಗೆ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇತ್ತೀಚೆಗೆ ಕೊಹ್ಲಿ ಅತಿಯಾದ ಸರಣಿ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದರು. ವಿಶ್ರಾಂತಿ ಇಲ್ಲದೆ ಆಡುವುದು ಕಷ್ಟ ಎಂದು ಪ್ರತಿಪಾದಿಸಿದ್ದರು. ಈ ಕಾರಣಕ್ಕಾಗಿ ಕೊಹ್ಲಿಗೆ 1 ತಿಂಗಳು ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಕೊಹ್ಲಿ  ಲಂಕಾ ವಿರುದ್ಧ ಏಕದಿನ  ಮತ್ತು ಟಿ20 ಸರಣಿಯಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿದೆ. ಕೊಹ್ಲಿ ವಿಶ್ರಾಂತಿ ತೆಗೆದುಕೊಂಡರೆ ರೋಹಿತ್‌ ಶರ್ಮ ಏಕದಿನ, ಟಿ20ನಲ್ಲಿ  ತಂಡವನ್ನು ಮುನ್ನಡೆಸಲಿದ್ದಾರೆ. ಒಂದು ವೇಳೆ ಕೊಹ್ಲಿ ಲಂಕಾ ವಿರುದ್ಧದ 3ನೇ ಟೆಸ್ಟ್‌ನಿಂದ ಹೊರಗುಳಿಯುವ ನಿರ್ಧಾರ ಮಾಡಿದರೆ ಟೆಸ್ಟ್‌ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ.

ಹೆಚ್ಚುವರಿ ಬೌಲಿಂಗ್‌ನಲ್ಲಿ ವೇಗಿ ಜಸ್‌ಪ್ರೀತ್‌ ಬುಮ್ರಾ ಹಾಗೂ ಸ್ಪಿನ್ನರ್‌ ಕುಲದೀಪ್‌ ಯಾದವ್‌ ನಡುವೆ ಸ್ಥಾನಕ್ಕಾಗಿ ಪೈಪೋಟಿ ಏರ್ಪಡಲಿದೆ. ಆಯ್ಕೆ ಸಮಿತಿ ನಾಲ್ಕು ಪ್ರತ್ಯೇಕ ಕ್ರಿಕೆಟ್‌ ತಂಡಗಳನ್ನು ಪ್ರಕಟಿಸುವ ಸಾಧ್ಯತೆ ಇದೆ. ಇದರಲ್ಲಿ ಶ್ರೀಲಂಕಾ ವಿರುದ್ಧದ ಮುಂದಿನ ಟೆಸ್ಟ್‌, ಏಕದಿನ ಹಾಗೂ ಟಿ20 ಪಂದ್ಯಗಳಿಗೆ ಹಾಗೂ ದಕ್ಷಿಣ ಆಫ್ರಿಕಾ ಸರಣಿಯ ಮೊದಲ ಟೆಸ್ಟ್‌ಗೆ ತಂಡ ಪ್ರಕಟವಾಗುವ ನಿರೀಕ್ಷೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next