Advertisement

Investigation: ಅಶ್ವತ್ಥ ನಾರಾಯಣ ವಿರುದ್ಧದ ತನಿಖೆಗೆ ತಡೆ

12:45 AM May 31, 2023 | Team Udayavani |

ಬೆಂಗಳೂರು: ಉರಿಗೌಡ-ನಂಜೇಗೌಡ ಟಿಪ್ಪು ಸುಲ್ತಾನನನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪದಲ್ಲಿ ಮಾಜಿ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.
ತಮ್ಮ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್‌ ರದ್ದುಪಡಿಸುವಂತೆ ಕೋರಿ ಅಶ್ವತ್ಥ ನಾರಾಯಣ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು. ಅರ್ಜಿ ಆಲಿಸಿದ ನ್ಯಾಯಪೀಠ, ಪ್ರಕರಣದ ತನಿಖೆಗೆ ನಾಲ್ಕು ವಾರ ತಡೆ ನೀಡಿತು.

Advertisement

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ, ಇದೇ ಪ್ರಕರಣ ಸಂಬಂಧ ಕಳೆದ ಫೆಬ್ರವರಿಯಲ್ಲಿ ದೂರು ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು ಎನ್‌ಸಿಆರ್‌ ದಾಖಲಿಸಿದ್ದರು. ಈಗ ಸರಕಾರ ಬದಲಾದ ಅನಂತರ ಹೊಸ ದೂರು ನೀಡಲಾಗಿದೆ. ದುರುದ್ದೇಶಪೂರ್ವಕವಾಗಿ ದೂರು ದಾಖಲಿಸಲಾಗಿದೆ. ಚುನಾವಣೆಯಲ್ಲಿ ಸೋಲಿಸಬೇಕು ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದರು. ಆದ್ದರಿಂದ ಪ್ರಕರಣದ ತನಿಖೆಗೆ ತಡೆ ನೀಡಬೇಕು ಎಂದು ಕೋರಿದರು. ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಗ್ಯಾರಂಟಿ ಜಾರಿ ಸರಕಾರದ ಜವಾಬ್ದಾರಿ: ಎಚ್ಡಿಕೆ
ಚುನಾವಣೆಯಲ್ಲಿ ಭರವಸೆ ನೀಡಿದ್ದೀರಿ, ಗೆದ್ದು ಅಧಿಕಾರ ಹಿಡಿದಿದ್ದೀರಿ. ಐದು ಗ್ಯಾರಂಟಿ ಜಾರಿ ಮಾಡುವುದು ನಿಮ್ಮ ಜವಾಬ್ದಾರಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ನೀವು ಕೊಟ್ಟ ಭರವಸೆ ಈಡೇರಿಸಿ ಎಂದು ಒತ್ತಾಯಿಸಿದರೆ ಸಚಿವರನ್ನು ನನ್ನ ವಿರುದ್ಧ ಛೂ ಬಿಡುವ ಕೆಲಸ ಯಾಕೆ ಮಾಡುತ್ತಿದ್ದೀರಿ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ತನಿಖೆಗೆ ಸಿದ್ಧ: ಬೊಮ್ಮಾಯಿ

ಹೊಸ ಸರಕಾರ ಯಾವುದೇ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ಧ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಸರಕಾರ ತನಿಖೆಗೆ ಆದೇಶಿಸಿರುವುದರ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಹಗರಣಕ್ಕೆ ಸಂಬಂಧಿಸಿ ಯಾವುದೇ ತನಿಖೆ ಮಾಡಬಹುದು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಿಐಡಿ ತನಿಖೆ ಮಾಡಬಹುದು. ನಾನೇ ಹಿಂದೆ ದೂರು ನೀಡಿ¨ªೆ. ಚುನಾವಣ ನೀತಿ ಸಂಹಿತೆ ಇದ್ದ ಹಿನ್ನೆಲೆ ಎಫ್ಐಆರ್‌ ಆಗಿರಲಿಲ್ಲ ಎಂದರು.

Advertisement

ಹೊಸ ಸರಕಾರ ಬಂದಿದೆ, ಯಾವುದೇ ರೀತಿ ತನಿಖೆ ನಡೆಸಲಿ. ಎದುರಿಸಲು ನಾವು ಸಿದ್ಧ. ತನಿಖೆ ಪಾರದರ್ಶಕವಾಗಿರಲಿ. ತನಿಖೆ ಕಾಮಗಾರಿಗೆ ಅಡ್ಡಿ ಆಗಬಾರದು. ಟಾರ್ಗೆಟ್‌ ಮಾಡಿ ಕಾಮಗಾರಿ ಬದಲಾವಣೆ ಮಾಡುವ ದುರುದ್ದೇಶ ಇರಬಾರದು. ಉಚಿತ ಯೋಜನೆಗಳ ಬಗ್ಗೆ ಸಿಎಂ ಸಭೆ ಮಾಡಿ¨ªಾರೆ. ಎಲ್ಲ ಉಚಿತ ನೀಡಿದರೆ, ಅಭಿವೃದ್ಧಿ ಕಾರ್ಯ ಕುಂಠಿವಾಗಲಿದೆ. ಎಲ್ಲರಿಗೂ ಸಿಗುತ್ತದೆ ಅಂತ ಮೊದಲು ಆಶ್ವಾಸನೆ ನೀಡಿ¨ªಾರೆ. ಅತ್ತೆಗೋ, ಸೊಸೆಗೋ ಅಂತ ಮೊದಲು ಹೇಳಿರಲಿಲ್ಲ. ಏನು ಮಾಡಲಿ¨ªಾರೆ ಅಂತ ಕರ್ನಾಟಕದ ಜನತೆಗೆ ಕಾಡುತ್ತಿದೆ. ಆರ್ಥಿಕವಾಗಿ ಕಷ್ಟ ಅನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಜನರನ್ನು ಯಾಮಾರಿಸಿ ಗೆಲ್ಲಬೇಕು ಅಂತ ಮಾಡಿ¨ªಾರೆ. ಜನ ಈಗ ಅಧಿಕಾರ ಕೊಟ್ಟಿ¨ªಾರೆ. ಏನು ಮಾಡುತ್ತಾರೆ ಕಾದು ನೋಡೋಣ ಎಂದು ವ್ಯಂಗ್ಯವಾಡಿದರು.

ತಡೆ ತರುವ ತಂತ್ರವೇ?
ಉಚಿತ ಯೋಜನೆ ಘೋಷಣೆ ಜಾರಿ ಮಾಡದೆ ಇದ್ದರೆ ಕೆಲವರು ಕಾನೂನು ಹೋರಾಟ ಮಾಡಲಿ¨ªಾರೆ ಎನ್ನುವ ಎಚ್ಚರಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿ, ಸರಕಾರದವರೇ ಈ ರೀತಿ ಹೋರಾಟ ಮಾಡೋದಕ್ಕೆ ಹೇಳಿ, ಕೋರ್ಟ್‌ನಲ್ಲಿ ಫ್ರೀ ಯೋಜನೆಗೆ ತಡೆ ತರುವ ತಂತ್ರ ಇದ್ದರೂ ಇರಬಹುದು ಎಂದು ಬೊಮ್ಮಾಯಿ ಅನುಮಾನ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next