Advertisement

ಸ್ಫೋಟಕ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ : ಸಚಿವ ಬಸವರಾಜ ಬೊಮ್ಮಾಯಿ

10:18 AM Oct 23, 2019 | Team Udayavani |

ಹುಬ್ಬಳ್ಳಿ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ನಡೆದ ಸ್ಫೋಟ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸ್ಫೋಟಕದ ಮಾದರಿಯನ್ನು ಎಫ್ಎಸ್ಎಲ್ ಗೆ ಕಳಿಸಲಾಗಿದೆ. ಅದರ ವರದಿ ಬಂದ ಬಳಿಕ ನಿಖರ ಮಾಹಿತಿ ತಿಳಿಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಆಂಧ್ರಪ್ರದೇಶದಲ್ಲಿ ಇಂತಹ ಸ್ಫೋಟಕ ವಸ್ತು ಬಳಕೆ ಹೆಚ್ಚು. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ಪೊಲೀಸರ ಸಹಯೋಗದಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ಸ್ಪೋಟಕ ವಸ್ತುಗಳನ್ನು ಎಲ್ಲಿಂದ ತರಲಾಗಿದೆ, ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಈಗಲೇ ಪೂರ್ವಾಪರ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಸ್ಲೀಪರ್ ಸೆಲ್ ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ರಾಷ್ಟ್ರೀಯ ತನಿಖಾ ದಳದ ಮಾಹಿತಿ ಮೇರೆಗೆ ಐಎಸ್ ಡಿಯವರು ಹುಬ್ಬಳ್ಳಿ ಮೂಲದ ಓರ್ವನನ್ನು ಬಂಧಿಸಿದ್ದಾರೆ. ಈ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದರು.

ಇದೇ ವೇಳೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಿ.ಟಿ. ರವಿ, ಹುಬ್ಬಳ್ಳಿ ಈ ಹಿಂದಿನಿಂದಲೂ ಶಂಕಿತ  ಭಯೋತ್ಪಾದಕರ ಅಡುಗು ತಾಣ ಹಾಗೂ ಅವರ ಕಾರ್ಯಚಟುವಟಿಕೆಗಳಿಗೆ ನೆಲೆಯಾಗಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಲಿದೆ ಎಂದರು.

ಕಮಲೇಶ ತಿವಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿಯ ಮಹ್ಮದ್ ಸಾದಿಕ್ ಎಂಬ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಅವನನ್ನು ಸಂಪೂರ್ಣವಾಗಿ ವಿಚಾರಣೆಗೊಳಪಡಿಸಬೇಕು. ಅಲ್ಲದೇ, ಅವರ ಸಕ್ರಿಯ ಕಾರ್ಯಚಟುವಟಿಕೆಗಳ ಜಾಲವನ್ನು ಬೇರು ಸಮೇತ ಕಿತ್ತೊಗೆಯಬೇಕು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next