ಮೈಸೂರು: ಅರಮನೆ ಕಟ್ಟಿ 100 ವರ್ಷದ ಮೇಲಾಗಿದೆ ಎಂದು ಅರಮನೆ ಕೆಡವಿ ಬೇರೆ ಕಟ್ಟಲು ಆಗುತ್ತಾ? ಮೈಸೂರಿನ ಸಂಸ್ಕೃತಿ ಪಾರಂಪರಿಕ ಕಟ್ಟಡಗಳ ಜೊತೆ ಬೆರೆತಿದೆ, ನೂರು ವರ್ಷ ಆಗಿದೆ ಎಂದು ಕಟ್ಟಡಗಳನ್ನು ಒಡೆಯುತ್ತಾ ಹೋದರೆ ಪಾರಂಪರಿಕತೆ ಹೇಗೆ ಉಳಿಯುತ್ತದೆ? ಎಂದು ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಪ್ರಶ್ನಿಸಿದ್ದಾರೆ.
ದೇವರಾಜ ಮಾರುಕಟ್ಟೆ ಉಳಿಸುವ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಪಾರಂಪರಿಕ ಕಟ್ಟಡ ಕೆಡವಿದ ಮೇಲೆ ಅದೇ ಮಾದರಿಯಲ್ಲಿ ಕಟ್ಟಿದರೂ ಕೂಡಾ ಆ ಕಟ್ಟಡಕ್ಕೆ ಹಳೇ ಇತಿಹಾಸ ಬರುವುದಿಲ್ಲ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಪಾರಂಪರಿಕ ಕಟ್ಟಡ ಉಳಿಸುವ ಹೊಸ ತಜ್ಞರ ಸಮಿತಿ ರಚನೆ ಮಾಡಬೇಕು. ಜನರ ಅಭಿಪ್ರಾಯಗಳಿಗೆ, ಭಾವನೆಗಳಿಗೆ ಸ್ಪಂದಿಸುವುದು ಸರ್ಕಾರದ ಜವಾಬ್ದಾರಿ ಎಂದರು.
ನಮ್ಮ ವಂಶದ ಖಾಸಗಿ ಆಸ್ತಿಗಳ ನವೀಕರಣ ಅದು ಬೇರೆ ವಿಚಾರ. ಆದರೆ ಸಾರ್ವಜನಿಕರ ಸ್ವತ್ತಿನ ಕಟ್ಟಡಗಳದ್ದು ಬೇರೆಯ ವಿಚಾರ. ಅರಮನೆಯ ಆಸ್ತಿಯ ವಿಚಾರಕ್ಕೂ ಸಾರ್ವಜನಿಕರ ಸ್ವತ್ತಿನ ಪಾರಂಪರಿಕ ಕಟ್ಟಡಗಳಿಗೂ ಸಂಬಂಧ ಕಲ್ಪಿಸಬೇಡಿ ಎಂದರು.
ಇದನ್ನೂ ಓದಿ:ಕಾರು ಪಲ್ಟಿ : ಮಾಜಿ ಸಚಿವ ಜಯಚಂದ್ರ ಅವರ ಬೆನ್ನಿಗೆ ಪೆಟ್ಟು
ದೇವರಾಜ ಮಾರುಕಟ್ಟೆ ನಮ್ಮ ವ್ಯಾಪ್ತಿಗೆ ಕೊಟ್ಟರೆ ನಾವೇ ಪುನಶ್ಚೇತನ ಮಾಡುತ್ತೇವೆಂಬ ಪ್ರಮೋದಾದೇವಿ ಒಡೆಯರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅದಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ. ಅದನ್ನು ಅವರ ಬಳಿಯೇ ಕೇಳಿ ಎಂದರು.