Advertisement
ಬೆಂಗಳೂರು ನಗರ ಘಟಕ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ದೇಶದಲ್ಲಿ ವಿರೋಧ ಪಕ್ಷಗಳೇ ಇರಬಾರದು ಎನ್ನುವುದು ಬಿಜೆಪಿ ಅಜೆಂಡಾ ಆಗಿದೆ. ದೇಶವನ್ನು ಕೇಸರಿಕರಣ ಮಾಡಲು ಸಂಘ ಪರಿವಾರದ ಸಿದ್ಧಾಂತವನ್ನು ದೇಶದ ಮೇಲೆ ಹೇರುವ ಪ್ರಯತ್ನ ನಡೆಯುತ್ತಿದೆ. ದೇಶದ ಐಕ್ಯತೆ ಮತ್ತು ಜಾತ್ಯತೀತತೆ ಮೇಲೆ ಬಿಜೆಪಿಗೆ ನಂಬಿಕೆ ಇಲ್ಲ ಎಂದು ಆರೋಪಿಸಿದರು. ದೇಶದಲ್ಲಿ ಸಾಮಾನ್ಯ ಜನರಿಗೆ ಅನುಕೂಲವಾಗುವ ಯಾವ ಯೋಜನೆಯನ್ನೂ ಕೇಂದ್ರ ಸರ್ಕಾರ ನೀಡಿಲ್ಲ. ನೋಟು ರದ್ದತಿ ಬಳಿಕ ಭ್ರಷ್ಟಾಚಾರ ಇರುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಈಗ ಬಿಜೆಪಿಯವರೇ ಬೇರೆಪಕ್ಷಗಳ ಶಾಸಕರನ್ನು ಖರೀದಿ ಮಾಡುವ ಮೂಲಕ ದೊಡ್ಡ ಭ್ರಷ್ಟಾಚಾರಿಗಳಾಗಿದ್ದಾರೆ. ಪ್ರಧಾನಿ ವಿರುದ್ಧ ಮಾತನಾಡಿದರೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತದೆ. ಅವರ ವಿರುದ್ಧ ಸುದ್ದಿ ಮಾಡುವ ಮಾಧ್ಯಮಗಳಿಗೆ ನೋಟಿಸ್ ನೀಡಲಾಗುತ್ತಿದೆ. ಇಡೀ ದೇಶವನ್ನು ಮೋದಿ ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲು ಹೊರಟಿದ್ದಾರೆ ಎಂದು ದೂರಿದರು.
Related Articles
Advertisement