Advertisement

ಪರ್ಯಾಯ ವ್ಯವಸ್ಥೆ ನಂತರವೇ ಜನತಾ ಬಜಾರ್‌ ಅಭಿವೃದ್ಧಿ

12:18 PM Nov 15, 2017 | Team Udayavani |

ಹುಬ್ಬಳ್ಳಿ: ಜನತಾ ಬಜಾರ್‌ನಲ್ಲಿ ವ್ಯಾಪಾರ ಮಾಡುವವರಿಗೆ ಬೇರೆಡೆ ವ್ಯಾಪಾರಕ್ಕೆ ಸಮರ್ಪಕ ವ್ಯವಸ್ಥೆ ಕಲ್ಪಿಸಿದ ನಂತರವೇ ಜನತಾ ಬಜಾರ್‌ ಅಭಿವೃದ್ಧಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ಹೇಳಿದರು. 

Advertisement

ಜನತಾ ಬಜಾರ್‌ನಲ್ಲಿ ಮಂಗಳವಾರ ನಡೆದ ಹು-ಧಾ ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಮಂಜೂರಾತಿ ಪಡೆದ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂಬಂಧ ವ್ಯಾಪಾರಸ್ಥರು ಹಾಗೂ ನಾಗರಿಕರೊಂದಿಗಿನ ಸಮಾಲೋಚನೆ ಸಭೆಯಲ್ಲಿ ಮಾತನಾಡಿದರು. 

ವ್ಯಾಪಾರಸ್ಥರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಲಾಗುವುದಾಗಿ ಬೇಕಾದರೆ ಬಾಂಡ್‌ನ‌ಲ್ಲಿ ಬರೆದುಕೊಡುತ್ತೇನೆ. ವ್ಯಾಪಾರಸ್ಥರನ್ನು ಅತಂತ್ರರನ್ನಾಗಿ ಮಾಡುವುದಿಲ್ಲ. ನಗರದಲ್ಲಿ 2-3 ಜಾಗಗಳನ್ನು ಗುರುತಿಸಲಾಗಿದ್ದು, ಅಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು ಎಂದರು.

 ಮಹಾಪೌರ ಡಿ.ಕೆ. ಚವ್ಹಾಣ ಮಾತನಾಡಿ, ಅಭಿವೃದ್ಧಿ ಯೋಜನೆಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ವ್ಯಾಪಾರಸ್ಥರಿಗೆ ಸಮರ್ಪಕ ಸೌಲಭ್ಯ ಕಲ್ಪಿಸಿದ ನಂತರವೇ ಇಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 

ಸ್ಮಾರ್ಟ್‌ಸಿಟಿ ಯೋಜನೆ ಅನುಷ್ಠಾನದ ಜವಾಬ್ದಾರಿ ವಹಿಸಿಕೊಂಡಿರುವ ಪಿಡಬುಸಿ ಸಂಸ್ಥೆಯ ಸಿಟಿ ಪ್ಲಾನರ್‌ ಮನದೀಪ್‌ ಸಿಂಗ್‌ ಮಾತನಾಡಿ, ಜನತಾ ಬಜಾರ್‌ 2021 ಚ.ಮೀ. ವಿಸ್ತೀರ್ಣ ಹೊಂದಿದ್ದು, ಒಟ್ಟು 18 ಕೋಟಿ ರೂ. ವೆಚ್ಚದಲ್ಲಿ ಮಾರುಕಟ್ಟೆ ಅಭಿವೃದ್ಧಿ ಪಡಿಸಲಾಗುತ್ತದೆ. 

Advertisement

ವ್ಯಾಪಾರಸ್ಥರು ಹಾಗೂ ಸಾರ್ವಜನಿಕರ ಅಭಿಪ್ರಾಯ ಪಡೆದು ಬೇಡಿಕೆಗಳಿಗೆ ಅನುಗುಣವಾಗಿ ಮಾರುಕಟ್ಟೆ ಅಭಿವೃದ್ಧಿಪಡಿಸಲಾಗುವುದು ಎಂದರು. 18ರಿಂದ 24 ತಿಂಗಳುಗಳಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು. ಈ ಭಾಗದಲ್ಲಿ ಮರಳಿನ ಕೊರತೆಯಿದೆ ಎಂಬುದು ನಮಗೆ ತಿಳಿದಿದ್ದು,

ಆದರೆ ಫ್ಲೈ ಆ್ಯಶ್‌ ಬಳಕೆ ಸೇರಿದಂತೆ ನೂತನ ತಂತ್ರಜ್ಞಾನ ಬಳಕೆ ಮಾಡಿಕೊಂಡು ಕಟ್ಟಡ ನಿರ್ಮಿಸಲಾಗುವುದು ಎಂದು ತಿಳಿಸಿದರು.  ವ್ಯಾಪಾರಿ ಫ‌ಕೀರಪ್ಪ ಮಾತನಾಡಿ, ನಾನು 20 ವರ್ಷಗಳಿಂದ ಇಲ್ಲಿ ವ್ಯಾಪಾರ ಮಾಡಿಕೊಂಡು ಜೀವನ ನಿರ್ವಹಣೆ ಮಾಡಿಕೊಳ್ಳುತ್ತಿದ್ದೇವೆ.

ನಮ್ಮನ್ನು ಅತಂತ್ರರನ್ನಾಗಿಸಿದರೆ ಬೀದಿಗೆ ಬರುವುದರಲ್ಲಿ ಸಂಶಯವಿಲ್ಲ. ನಮಗೆ ವ್ಯಾಪಾರಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಪಿಡಬುಆರ್‌ ಕಂಪನಿಯ ವ್ಯವಸ್ಥಾಪಕ ಶಾಂತನು ಸೇನ್‌, ಜಿ.ಎಚ್‌. ನರೇಗಲ್‌ ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next