ಬೆಂಗಳೂರು: ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಗೆ ನಿರೀಕ್ಷಣಾ ಜಾಮೀನಿನ ಮಧ್ಯಂತರ ಅವಧಿಯನ್ನು ಮುಂದಿನ ವಿಚಾರಣೆಯವರೆಗೆ ಹೈಕೋರ್ಟ್ ವಿಸ್ತರಿಸಿದೆ. ಈ ಕುರಿತು ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾ.ರತ್ನಕಲಾ ಅವರಿದ್ದ ಏಕಸದಸ್ಯ ಪೀಠ, ಗುರುವಾರ ಕೈಗೆತ್ತಿಕೊಂಡು ಈ ಮಧ್ಯಂತರ ಆದೇಶ ನೀಡಿದೆ.
ವಿಚಾರಣೆ ವೇಳೆ ಎಸ್‌ಐಟಿ ಪರ ವಿಶೇಷ ಅಭಿಯೋಜಕ ಪಿ. ಗೋವಿಂದನ್ ವಾದಿಸಿ, ಅರ್ಜಿದಾರರು ಪ್ರಕರಣದ
ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಈ ಪ್ರಕರಣ ಸಂಬಂಧ ಅವರನ್ನು ವಿಚಾರಣೆಗೊಳಪಡಿಸಲೇಬೇಕಿದೆ ಹೀಗಾಗಿ, ಜಾಮೀನು ನೀಡಬಾರದು ನ್ಯಾಯಪೀಠಕ್ಕೆ ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ತಡೆಯಾಜ್ಞೆ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ನ್ಯಾಯಪೀಠಕ್ಕೆ ಸಲ್ಲಿಸಿ ಎಂದು ಕುಮಾರಸ್ವಾಮಿ ಪರ ವಕೀಲರಿಗೆ ಸೂಚನೆ ನೀಡಿತು. ಜತೆಗೆ ಅರ್ಜಿದಾರರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ ಮುಂದಿನ ಎರಡು ವಾರಗಳಿಗೆ ವಿಚಾರಣೆ ಮುಂದೂಡಿತು.