Advertisement

ಬಿಜೆಪಿ ಸೇರ್ಪಡೆಯಿಂದ ಜೆಡಿಎಸ್‌ಗೆ ನಷ್ಟವಿಲ್ಲ

08:00 AM Jan 19, 2018 | Team Udayavani |

ಬೀದರ: ರಾಯಚೂರು ಜಿಲ್ಲೆಯ ಇಬ್ಬರು ಜೆಡಿಎಸ್‌ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿರುವ ವಿಷಯದಲ್ಲಿ ಆಶ್ಚರ್ಯ ಇಲ್ಲ. 2 ವರ್ಷಗಳ ಹಿಂದೆಯೇ ಇವರು ಬಿಜೆಪಿ ಬಾಗಿಲು ತಟ್ಟಿದ್ದಾರೆ. ಅವರನ್ನು ಪಕ್ಷ ದಿಂದ ತೆಗೆದು ಹಾಕುವ ಬದಲು ಇದೀಗ ಅವರೇ ಪಕ್ಷ ಬಿಟ್ಟು ಹೋಗಿರುವುದರಿಂದ ಯಾವುದೇ ನಷ್ಟ ಇಲ್ಲ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರಿನ 2 ಕ್ಷೇತ್ರದಲ್ಲಿ ಬೇಕಾದಷ್ಟು ಅರ್ಹ ಅಭ್ಯರ್ಥಿಗಳಿದ್ದಾರೆ. ಜೆಡಿಎಸ್‌ ಸೇರಲು ಬಿಜೆಪಿ ಮತ್ತು ಕಾಂಗ್ರೆಸ್‌ನ ಹಲವು ಶಾಸಕರು ಸಂಪರ್ಕದಲ್ಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next