Advertisement

ಯೋಜನೆಗೆ ಅಡ್ಡಿಪಡಿಸಿ ದಿಕ್ಕು ತಪ್ಪಿಸುವ ಕೆಲಸ

12:34 PM Aug 30, 2018 | Team Udayavani |

ಮಹದೇವಪುರ: ಸ್ಟೀಲ್‌ ಬ್ರಿಡ್ಜ್ ಬೇಡ, ಅ ಸೇತುವೆ ಬೇಡ, ಈ ಯೋಜನೆ ಬೇಡ ಎಂದು ನಗರದ ಅಭಿವೃದ್ಧಿಗಾಗಿ ಸರ್ಕಾರ ರೂಪಿಸುವ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಅಡ್ಡಿಪಡಿಸುವ ಮೂಲಕ ಕೆಲವರು ಸಾರ್ವಜನಿಕರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಬೇಸರ ವ್ಯಕ್ತಪಡಿಸಿದರು.

Advertisement

ವೈಟ್‌ಫೀಲ್ಡ್‌ನ ಇಪಿಐಪಿ ಬಳಿ ನಿರ್ಮಿಸಿರುವ ಅಗ್ನಿಶಾಮಕ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ನಗರದ ಅಭಿವೃದ್ಧಿಗೆ ತೊಡಕುಂಟು ಮಾಡುವ ಜನ ಪ್ರತಿನಿಧಿಗಳ ಧೋರಣೆ ಬದಲಾಗಬೇಕು. ತಾವೂ ಸಹ ಅಭಿವೃದ್ಧಿಯಲ್ಲಿ ಭಾಗೀದಾರರು ಎಂಬ ಅಂಶವನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

5200 ಚದರ ಅಡಿ ವಿಸ್ತೀರ್ಣದಲ್ಲಿ ಎರಡು ಕೋಟಿ ರೂ. ವೆಚ್ಚ ಮಾಡಿ ಅಗ್ನಿಶಾಮಕ ಕೇಂದ್ರದ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಇದರಿಂದ ವೈಟ್‌ಫೀಲ್ಡ್‌, ಕಾಡುಗೋಡಿ, ಹೂಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ತುರ್ತಾಗಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಡೆಯಲು ಸಾಧ್ಯವಾಗಲಿದೆ. ಖಾಸಗಿ ಕಂಪನಿಗಳು ತಮ್ಮ ಸಿಎಸ್‌ಆರ್‌ ಅನುದಾನದಡಿ ಸಮಾಜಿಕ ಕಾರ್ಯಗಳಿಗೆ ಕೈ ಜೋಡಿಸಿದರೆ ಅಭಿವೃದ್ಧಿಯಲ್ಲಿ ಕರ್ನಾಟಕ ಉನ್ನತ ಸ್ಥಾನಕ್ಕೇರುತ್ತದೆ ಎಂದು ಹೇಳಿದರು.

ಈಗಾಗಲೇ ಜಾಹೀರಾತು ಫ‌ಲಕ, ಫ್ಲೆಕ್ಸ್‌, ಬ್ಯಾನರ್‌ಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವ ಮೂಲಕ ಬೆಂಗಳೂರನ್ನು ಸುಂದರ ನಗರವನ್ನಾಗಿ ಮಾಡಲಾಗಿದೆ. 8 ಸಾವಿರ ಕಿ.ಮೀ ಅನಧಿಕೃತ ಕೇಬಲ್‌ ತೆರವುಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಅಗ್ನಿಶಾಮಕ ಕೇಂದ್ರದ ಕಟ್ಟಡ ನಿರ್ಮಿಸಿರುವ ನೆಟ್‌ಆಪ್‌ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ದೀಪಕ್‌ ವಿಶ್ವೇಶ್ವರಯ್ಯ, ಗೃಹ ರಕ್ಷಕ ದಳದ ಪೊಲೀಸ್‌ ಮಹಾ ನಿರ್ದೇಶಕ ಎಂ.ಎನ್‌.ರೆಡ್ಡಿ, ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಸುನೀಲ್‌ ಅಗರ್ವಾಲ್‌, ಪಾಲಿಕೆ ಸದಸ್ಯ ಎ.ಸಿ.ಹರಿಪ್ರಸಾದ್‌, ಕೆಎಸ್‌ಎಫ್‌ಇಎಸ್‌ ನಿರ್ದೇಶಕ ಕೆ.ಯು.ರಮೇಶ್‌ ಮತ್ತಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next