Advertisement
ಕಡಬದಲ್ಲಿ ಸರಕಾರಿ ಪದವಿ ಕಾಲೇಜು ಆರಂಭಿಸಬೇಕೆನ್ನುವ ಬೇಡಿಕೆಯನ್ನು ಮುಖ್ಯಮಂತ್ರಿಗಳ ಮುಂದೆಯೂ ಇರಿಸಲಾಗಿತ್ತು. ಕಳೆದ ವರ್ಷ (ಅ. 9) ಪಶು ವೈದ್ಯಕೀಯ ಕಾಲೇಜು ಕಟ್ಟಡದ ಶಂಕುಸ್ಥಾಪನೆಗಾಗಿ ಕೊಯಿಲಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮುಂದಿನ ಶೈಕ್ಷಣಿಕ ವರ್ಷದಿಂದ ಕಡಬದಲ್ಲಿ ಸರಕಾರಿ ಪದವಿ ಕಾಲೇಜು ಆರಂಭಿಸಲಾಗುವುದು ಎಂದು ಪ್ರಕಟಿಸಿದ್ದರು. ಆದರೆ ಈ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡು ಅರ್ಧ ಅವಧಿ ಮುಗಿದರೂ ಮುಖ್ಯಮಂತ್ರಿಗಳ ಭರವಸೆ ಈಡೇರಿಲ್ಲ.
ಕಡಬ ಸರಕಾರಿ ಪ್ರೌಢಶಾಲೆಯ 14.5 ಎಕ್ರೆ ಪೈಕಿ 5 ಎಕ್ರೆ ಜಾಗವನ್ನು ಕಡಬ ಸ.ಪ್ರ. ದರ್ಜೆ ಕಾಲೇಜು ಸ್ಥಾಪನೆಗೆ ಕಾದಿರಿಸಿದ ಜಿಲ್ಲಾಧಿಕಾರಿ, ಈ ಬಗ್ಗೆ ಸಹಾಯಕ ಕಮಿಷನರ್‌ಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ 5 ಎಕರೆ ಜಮೀನನ್ನು ಗಡಿ ಗುರುತು ಮಾಡಲಾಗಿದೆ. ಪದವಿ ಕಾಲೇಜಿನೊಂದಿಗೆ ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನೂ ಆರಂಭಿಸಿದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಅದಕ್ಕಾಗಿ ವೃತ್ತಿಪರ ಶಿಕ್ಷಣ ಕೋರ್ಸುಗಳನ್ನು ಆರಂಭಿಸುವ ನಿಟ್ಟಿನಲ್ಲಿಯೂ ಜನಪ್ರತಿನಿಧಿಗಳು ಪ್ರಯತ್ನಿಸುವ ಅಗತ್ಯವಿದೆ.
Related Articles
ಕಡಬದಲ್ಲಿ ಸರಕಾರಿ ಪದವಿ ಕಾಲೇಜು ಆರಂಭಿಸಬೇಕೆನ್ನುವ ಬೇಡಿಕೆಯನ್ನು ಸರಕಾರದ ಮುಂದಿಡಲಾಗಿದೆ. ಆದರೆ ಸರಕಾರವು ಹೊಸದಾಗಿ ಯಾವುದೇ ಪದವಿ ಕಾಲೇಜುಗಳನ್ನು ಮಂಜೂರುಗೊಳಿಸಿಲ್ಲ. ಇದೀಗ ಕಡಬವು ತಾ| ಕೇಂದ್ರವಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಆದ್ಯತೆಯ ಮೇಲೆ ಕಡಬದಲ್ಲಿ ಸರಕಾರಿ ಪದವಿ ಕಾಲೇಜು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಸಂಬಂಧಪಟ್ಟ ಸಚಿವರು, ಇಲಾಖಾಧಿಕಾರಿಗಳಲ್ಲಿ ಮಾತುಕತೆ ನಡೆಸಲಾಗಿದೆ.
– ಎಸ್. ಅಂಗಾರ, ಸುಳ್ಯ ಶಾಸಕರು
Advertisement
ಸರಕಾರಿ ಪದವಿ ಕಾಲೇಜು ಅಗತ್ಯಹಲವಾರು ಬಾರಿ ಬೆಂಗಳೂರಿಗೆ ತೆರಳಿ ಸಂಬಂಧಪಟ್ಟ ಇಲಾಖೆಯ ಉನ್ನತ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಮುಖ್ಯಮಂತ್ರಿಗಳಿಗೂ ಮನವಿ ಸಲ್ಲಿಸಲಾಗಿದೆ. ವಿದ್ಯಾರ್ಥಿಗಳ ಕೊರತೆಯಿಂದಾಗಿ ಹಲವಾರು ಕಾಲೇಜುಗಳು ಮುಚ್ಚುತ್ತಿದ್ದು, ಸರಕಾರವು ಹೊಸದಾಗಿ ಪ.ಪೂ., ಪದವಿ ಕಾಲೇಜು ಆರಂಭಿಸಲು ಹಿಂದೇಟು ಹಾಕುತ್ತಿರುವಂತಿದೆ. ಕಡಬದಲ್ಲಿ ಸ.ಪದವಿ ಕಾಲೇಜಿನ ಅಗತ್ಯವಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದೇವೆ.
–ವಿಜಯಕುಮಾರ್ ರೈ ಕರ್ಮಾಯಿ,
ಅಧ್ಯಕ್ಷರು, ಕಡಬ ಸ. ಪ. ಕಾಲೇಜು ಹೋರಾಟ ಸಮಿತಿ ನಾಗರಾಜ್ ಎನ್.ಕೆ. ಕಡಬ