Advertisement

ಕಂಪ್ಯೂಟರ್‌ ಕುರಿತ ಕನ್ನಡ ಪುಸ್ತಕ ವಿರಳ

12:06 PM Jul 23, 2018 | |

ಬೆಂಗಳೂರು: ಸೌಲಭ್ಯ ಹಾಗೂ ಪ್ರೋತ್ಸಾಹ ಇದ್ದರೂ ಸಾಹಿತಿಗಳು ವಿಜ್ಞಾನ, ತಂತ್ರಜ್ಞಾನ ಮತ್ತು ಕಂಪ್ಯೂಟರ್‌ ವಿಷಯಾಧಾರಿತ ಪುಸ್ತಕಗಳನ್ನು ಕನ್ನಡದಲ್ಲಿ ಬರೆಯುವ ಮನಸು ಮಾಡುತ್ತಿಲ್ಲ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್‌.ಹೊನ್ನೇಗೌಡ ಕಳವಳ ವ್ಯಕ್ತಪಡಿಸಿದ್ದಾರೆ.

Advertisement

ಕ್ಲಾರಿಟ್ರೀ ಸಂಸ್ಥೆ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೇಖಕ ಮಹದೇವಯ್ಯ ಅವರ “ವೃತ್ತಿಪರ ಕಂಪ್ಯೂಟರ್‌ ಸಾಕ್ಷರತೆ’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು. ಕನ್ನಡಿಗರು ಕಂಪ್ಯೂಟರ್‌ ಶಿಕ್ಷಣಕ್ಕಾಗಿ ಇಂಗ್ಲಿಷ್‌ ಪುಸ್ತಕದ ಮೊರೆ ಹೋಗುತ್ತಿದ್ದಾರೆ.

ಬೆಂಗಳೂರಿನಲ್ಲಿರುವ 3500ಕ್ಕೂ ಅಧಿಕ ಐಟಿ ಕಂಪನಿಗಳಲ್ಲಿ 10 ಸಾವಿರಕ್ಕೂ ಹೆಚ್ಚು ಇಂಜಿನಿಯರ್‌ಗಳು, ವಿಜ್ಞಾನಿಗಳು ಕೆಲಸ ಮಾಡುತ್ತಿ¨ªಾರೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರ ಜಿಡಿಪಿಗೂ ಸಾಕಷ್ಟು ಕೊಡುಗೆ ನೀಡುತ್ತಿದೆ. ಇಷ್ಟಾದರೂ ಕನ್ನಡದಲ್ಲಿ ಸುಲಭವಾದ ತಂತ್ರಾಂಶ ಲಭ್ಯವಾಗುತ್ತಿಲ್ಲ ಎಂದರು.

ನಮ್ಮಲ್ಲಿ ಎಲ್ಲ ಅನುಕೂಲ ಇದ್ದರೂ ಮಾಹಿತಿ ತಂತ್ರಜ್ಞಾನ ಹಾಗೂ ಕಂಪ್ಯೂಟರ್‌ ಕುರಿತ ಕನ್ನಡ ಪುಸ್ತಕ ಬರೆಯಲು ಸಾಧ್ಯವಾಗುತ್ತಿಲ್ಲ. ಕನ್ನಡ ಸಾಫ್ಟ್ವೇರ್‌ಗಳು ಬರುತ್ತಿಲ್ಲ ಎಂದ ಅವರು, ಕನ್ನಡ ಪುಸ್ತಕ ಬರೆಯಲು ಲೇಖಕರು ಆಸಕ್ತಿ ತೋರಬೇಕು ಎಂದು ಸಲಹೆ ನೀಡಿದರು.

ದೇಶದ ನಗರ ಪ್ರದೇಶದ ಶೇ.60ರಷ್ಟು ಹಾಗೂ ಗ್ರಾಮೀಣ ಭಾಗದ ಶೇ.15ರಷ್ಟು ಜನ ಇಂಟರ್‌ನೆಟ್‌ ಬಳಸುತ್ತಿದ್ದಾರೆ. ತಮಿಳು ಮತ್ತು ಹಿಂದಿ ಭಾಷೆಯಲ್ಲಿ ಗೂಗಲ್‌ ಸರ್ಚಿಂಗ್‌ ಹೆಚ್ಚಾಗುತ್ತಿದೆ. ಬಹುತೇಕರು ಮಾತೃಭಾಷೆಯಲ್ಲಿ ಇಂಟರ್‌ನೆಟ್‌ ಸರ್ಚ್‌ ಮಾಡಲು ಬಯಸುತ್ತಾರೆ. ಆದರೆ, ಅದು ಕನ್ನಡಿಗರಿಗೆ ಸುಲಭ ಸಾಧ್ಯವಾಗಿಲ್ಲ.

Advertisement

ಹೀಗಾಗಿ ಮಾತೃಭಾಷೆಯಲ್ಲಿ ತಂತ್ರಜ್ಞಾನ ಕುರಿತ ಹೆಚ್ಚು ಹೆಚ್ಚು ಕೃತಿಗಳನ್ನು ರಚಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಲೇಖಕ ಮಹದೇವಯ್ಯ ಅವರು ಉತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾ ಸಿದರು. ವಿಜ್ಞಾನಿ ಡಾ.ಸುಧೀಂದ್ರ ಹಾಲೊªಡ್ಡೇರಿ ಮಾತನಾಡಿ, ಕಂಪ್ಯೂಟರ್‌ ನಮ್ಮ ನಿತ್ಯ ಜೀವನದ ಸಂಗತಿ. ವಿಜ್ಞಾನ ಮತ್ತು ತಂತ್ರಜ್ಞಾನದ ಕನ್ನಡ ಬರಹಗಳನ್ನು ಯಾರೂ ಓದುವುದಿಲ್ಲ ಎಂಬ ಭ್ರಮೆ ಬಿಟ್ಟು ಹೆಚ್ಚು ಪುಸ್ತಕ ಬರೆಯಬೇಕು.

ಕನ್ನಡದ ಶಾಸ್ತ್ರೀಯ ಸ್ಥಾನಮಾನಕ್ಕೆ ಇಂತಹ ಕೃತಿಗಳು ಅವಶ್ಯ. ತಂತ್ರಜ್ಞಾನದ ನಾಗಾಲೋಟದ ಯುಗದಲ್ಲಿ ಕಂಪ್ಯೂಟರ್‌ ಕುರಿತ ಕನ್ನಡ ಬರಹ ಕಬ್ಬಿಣದ ಕಡಲೆ ಅಲ್ಲ ಎಂಬುದು ಈ ಪುಸ್ತಕದಿಂದ ಸ್ಪಷ್ಟವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್‌.ವೇಣುಗೋಪಾಲ್‌, ಲೇಖಕ ಮಹದೇವಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next