ಶ್ರೀನಗರ: ಕಾಶ್ಮೀರಿ ಪಂಡಿತ್ ಸರ್ಕಾರಿ ನೌಕರ ರಾಹುಲ್ ಭಟ್ ಹತ್ಯೆಯಾದ ಕೆಲವೇ ದಿನಗಳ ನಂತರ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಕೇಂದ್ರಾಡಳಿತ ಪ್ರದೇಶದಲ್ಲಿ ಹಿಂಸಾಚಾರವನ್ನು ಪ್ರಚೋದಿಸಲು ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ ಫೈಲ್ಸ್’ ಚಿತ್ರವನ್ನು ದೂಷಿಸಿದ್ದಾರೆ. ಅಲ್ಲದೆ ತನ್ನ ಅಧಿಕಾರಾವಧಿಯಲ್ಲಿ ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲಾಗಿತ್ತು ಎಂದಿದ್ದಾರೆ.
“ನಾವು ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಿದ್ದೇವೆ. 2016 ರಲ್ಲಿ ಗರಿಷ್ಠ ಅಶಾಂತಿಯ ಸಂದರ್ಭದಲ್ಲಿ ಯಾವುದೇ ಹತ್ಯೆ ನಡೆದಿಲ್ಲ. ಕಾಶ್ಮೀರ ಫೈಲ್ಸ್ ಚಲನಚಿತ್ರವು ಹಿಂಸಾಚಾರವನ್ನು ಪ್ರಚೋದಿಸಿದೆ” ಎಂದು ಮುಫ್ತಿ ಸುದ್ದಿಗಾರರಿಗೆ ತಿಳಿಸಿದರು.
ಇದಲ್ಲದೆ, ಮುಫ್ತಿ ಅವರು ಜ್ಞಾನವಾಪಿ ವಿವಾದದ ಬಗ್ಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿದರು ಮತ್ತು “ಅವರು ನಮ್ಮ ಎಲ್ಲಾ ಮಸೀದಿಗಳ ಹಿಂದೆ ಬಿದ್ದಿದ್ದಾರೆ” ಎಂದರು.
” ಕೇಂದ್ರ ಸರ್ಕಾರವು ನೈಜ ವಿಷಯಗಳಿಂದ ವಿಚಲಿತರಾಗಲು ಹಿಂದೂ-ಮುಸ್ಲಿಂ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ಈಗ ಜ್ಞಾನವಾಪಿ ಮಸೀದಿಯ ಹಿಂದೆ ಇದ್ದಾರೆ. ಅವರು ನಮ್ಮ ಎಲ್ಲಾ ಮಸೀದಿಗಳ ಹಿಂದೆ ಇದ್ದಾರೆ. ನೀವು ಕಣ್ಣು ಹಾಕಿರುವ ಎಲ್ಲಾ ಮಸೀದಿಗಳ ಪಟ್ಟಿಯನ್ನು ನಮಗೆ ನೀಡಿ,” ಮಾಜಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ:ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್ ಪ್ರಕ್ರಿಯೆ ಆರಂಭವಾಗಿಲ್ಲ
ಈತನ್ಮಧ್ಯೆ, ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯ-ಜ್ಞಾನವಾಪಿ ಮಸೀದಿ ಸಂಕೀರ್ಣದ ನ್ಯಾಯಾಲಯದ ಆದೇಶದ ವೀಡಿಯೊಗ್ರಫಿ ಸಮೀಕ್ಷೆಯ ಮೂರನೇ ದಿನ ಸೋಮವಾರ ಮುಕ್ತಾಯಗೊಂಡಿದ್ದು, ಪ್ರಕರಣದ ಹಿಂದೂ ಅರ್ಜಿದಾರ ಸೋಹನ್ ಲಾಲ್ ಆರ್ಯ ಅವರು ಸಮಿತಿಯು ಸಂಕೀರ್ಣದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಹೇಳಿದ್ದಾರೆ.