ನವದೆಹಲಿ: ಬಾಲಿವುಡ್ ನಲ್ಲಿ ಭರ್ಜರಿಯಾಗಿ ಸೆನ್ಸೇಷನ್ ಕ್ರಿಯೆಟ್ ಮಾಡಿರುವ ದಿ ಕೇರಳ ಸ್ಟೋರಿ ಗಲ್ಲಾ ಪೆಟ್ಟಿಗೆಯಲ್ಲಿ ಭರ್ಜರಿ ಗಳಿಕೆ ಕಂಡಿದೆ. ಮತ್ತೊಂದೆಡೆ ಕೇರಳ ಸ್ಟೋರಿ ನಿರ್ದೇಶಕ ಸುದಿಪ್ತೋ ಸೇನ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಒದಿ:ಅಂಕೋಲಾ: ಬೆಳ್ಳಂಬೆಳಗ್ಗೆ ಫೋಟೋ ಸ್ಟುಡಿಯೋದಲ್ಲಿ ಅಗ್ನಿ ಅವಘಡ: ಅಪಾರ ಹಾನಿ
ದಿ ಕೇರಳ ಸ್ಟೋರಿ ಸಿನಿಮಾ ಪ್ರಚಾರಕ್ಕಾಗಿ ಅವಿರತವಾಗಿ ತೊಡಗಿಸಿಕೊಂಡಿದ್ದರಿಂದ ಸೇನ್ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆಂದು ಚಿತ್ರತಂಡದ ಮೂಲಗಳು ಹೇಳಿವೆ.
ನ್ಯೂಸ್ ಔಟ್ ಲೆಟ್ ವರದಿ ಪ್ರಕಾರ, ಸದ್ಯ ಸುದಿಪ್ತೋ ಸೇನ್ ಅವರ ಪ್ರಚಾರ ಕಾರ್ಯ ಮತ್ತು ಎಲ್ಲಾ ಪ್ರಯಾಣವನ್ನು ಮುಂದೂಡಲಾಗಿದೆ ಎಂದು ವಿವರಿಸಿದೆ. ಅನಾರೋಗ್ಯದಿಂದ ಚೇತರಿಸಿಕೊಂಡ ಬಳಿಕ ಮತ್ತೆ ದಿ ಕೇರಳ ಸ್ಟೋರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ.
Related Articles
ಅದಾ ಶರ್ಮಾ ಮುಖ್ಯಭೂಮಿಕೆಯಲ್ಲಿರುವ ದಿ ಕೇರಳ ಸ್ಟೋರಿ ಸಿನಿಮಾ ಬಿಡುಗಡೆಯಾಗಿ 21ನೇ ದಿನಕ್ಕೆ ಬರೋಬ್ಬರಿ 213 ಕೋಟಿ ರೂಪಾಯಿ ಗಳಿಕೆ ಕಂಡಿದೆ.
ಮೇ 5ರಂದು ಸುದಿಪ್ತೋ ಸೇನ್ ನಿರ್ದೇಶನದ ದಿ ಕೇರಳ ಸ್ಟೋರಿ ಸಿನಿಮಾ ಬಿಡುಗಡೆಯಾಗಿತ್ತು. ಆರಂಭದಲ್ಲಿ ಪಶ್ಚಿಮಬಂಗಾಳದಲ್ಲಿ ಈ ಸಿನಿಮಾಕ್ಕೆ ನಿರ್ಬಂಧ ವಿಧಿಸಲಾಗಿದ್ದು, ತಮಿಳುನಾಡಿನಲ್ಲಿ ಸಿನಿಮಾ ಬಿಡುಗಡೆ ಮಾಡಿಲ್ಲವಾಗಿತ್ತು.