ಹೊಸದಿಲ್ಲಿ: ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರವಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರು ಬದಲಾವಣೆ ಮಾಡಲಾಗಿದೆ. ಈ ಅತ್ಯುನ್ನತ ಪುರಸ್ಕಾರಕ್ಕೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ’ ಎಂದು ಮರುನಾಮಕರಣ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಖೇಲ್ ರತ್ನ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಅವರ ಹೆಸರಿಡಲು ಭಾರತದಾದ್ಯಂತ ನಾಗರಿಕರಿಂದ ಅನೇಕ ಮನವಿಗಳು ಬಂದಿತ್ತು. ಅವರ ಅಭಿಪ್ರಾಯಗಳಿಗಾಗಿ ಧನ್ಯವಾದಗಳು. ಅವರ ಭಾವನೆಯನ್ನು ಗೌರವಿಸಿ, ಈ ಮೂಲಕ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ನಾಲ್ಕು ದಶಕಗಳ ಭಾರತ ಹಾಕಿ ತಂಡ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಸಂಭ್ರಮದ ಜೊತೆಗ ಹಾಕಿ ದಂತಕತೆ ಧ್ಯಾನ್ ಚಂದ್ ಗೆ ಈ ಗೌರವ ನೀಡಿರುವುದು ಸಂಭ್ರಮವನ್ನು ಹೆಚ್ಚಿಸಿದೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಟೋಕಿಯೊ ಒಲಿಂಪಿಕ್ಸ್: ಸೆಮಿ ಫೈನಲ್ ಪ್ರವೇಶ ಪಡೆದ ಕುಸ್ತಿಪಟು ಭಜರಂಗ್ ಪೂನಿಯಾ