Advertisement

ಹಾಸನದಲ್ಲಿ ಮಂಗಗಳ ಮಾರಣಹೋಮ: ವರದಿ ಕೇಳಿದ ಹೈಕೋರ್ಟ್

08:50 PM Jul 30, 2021 | Team Udayavani |

ಹಾಸನ: ಬೇಲೂರು ತಾಲೂಕಿ ಚೌಡೇನಹಳ್ಳಿಯ ಬಳಿ 30 ಕ್ಕೂ ಹೆಚ್ಚು ಮಂಗಗಳ ಕಳೇಬರ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈ ಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಆ.4 ರೊಳಗೆ ವರದಿ ಸಲ್ಲಿಸುವಂತೆ ಹಾಸನ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದೆ

Advertisement

ಹಾಸನದ ಚೌಡನಹಳ್ಳಿಯಲ್ಲಿ ಮಂಗಗಳ ಮಾರಣಹೋಮ ನಡೆದಿತ್ತು. ಇಂತಹ ಅಮಾನವೀಯ ಕೃತ್ಯಕ್ಕೆ ಹೈಕೋರ್ಟ್ ತೀವ್ರ ಆತಂಕ ವ್ಯಕ್ತಪಡಿಸಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಎಸ್​ಪಿ, ಆರ್​ಎಫ್ಒ ಅವರನ್ನು ಪ್ರತಿವಾದಿಯಾಗಿಸಲು ಸೂಚನೆ ನೀಡಲಾಗಿದೆ.

ಕಾಡಿನ ಪ್ರಾಣಿಗಳಿಗೂ ಬದುಕುವ ಹಕ್ಕಿದೆ. ಮಂಗಗಳನ್ನು ಬರ್ಬರವಾಗಿ ಹತ್ಯೆಗೈದಿರುವುದು ಆಘಾತಕಾರಿ. ಇಲ್ಲಿ ಪ್ರಾಣಿಗಳ ದೌರ್ಜನ್ಯ ತಡೆ ಕಾಯ್ದೆ ಸ್ಪಷ್ಟ ಉಲ್ಲಂಘನೆ ಆಗಿದೆ. ಮಂಗಗಳ ಹಾವಳಿಯನ್ನೂ ಘನತೆಯಿಂದ ನಿಯಂತ್ರಿಸಬೇಕು ಎಂದು ಕೋರ್ಟ್ ಹೇಳಿದೆ. ಅಷ್ಟೇ ಅಲ್ಲದೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಆಗಸ್ಟ್ 4ರ ಒಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯ ನ್ಯಾಯಮೂರ್ತಿ ಒಕಾ, ನ್ಯಾಯಮೂರ್ತಿ ಸಂಜಯ್ ಗೌಡರವರ ಪೀಠ ಆದೇಶ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next