Advertisement

ದ. ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ

01:08 PM Jan 16, 2021 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು.

Advertisement

ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಾಲನೆ ನೀಡಿ ಮಾತನಾಡಿದ ಅವರು,ಕೋವಿಡ್ ರೋಗಕ್ಕೆ ದೇಸೀಯ ಲಸಿಕೆ ನೀಡುತ್ತಿರುವುದು ಖುಷಿಯ ವಿಚಾರ. ಲಸಿಕೆ ಬಂತು ಎಂಬ ಮಾತ್ರಕ್ಕೆ ಕೋವಿಡ್ ನಿಯಮಗಳನ್ನು ಪಾಲನೆ ಮಾಡಲು ಮರೆಯದಿರಿ ಎಂದರು.

ಕಾರ್ಯಕ್ರಮದಲ್ಲಿ ನೂತನ ಸಚಿವ ಎಸ್.ಅಂಗಾರ, ಶಾಸಕರಾದ ವೇದವ್ಯಾಸ ಕಾಮತ್, ಡಾ.‌ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ದ.ಕ. ಜಿ.ಪಂ. ಸಿಇಒ ಸೆಲ್ವಮಣಿ, ಮೇಯರ್ ದಿವಾಕರ ಪಾಂಡೇಶ್ವರ, ದ.ಕ.‌ ಡಿಎಚ್ಒ ರಾಮಚಂದ್ರ ಬಾಯಾರಿ ಸೇರಿದಂತೆ ಮತ್ತಿತರರು ಇದ್ದರು.

ಮೊದಲ ಹಂತದಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಗುತ್ತದೆ.     ಮೊದಲ ದಿನ ಒಂದು ಕೇಂದ್ರದಲ್ಲಿ 100 ಮಂದಿಯಂತೆ 6 ಕೇಂದ್ರದಲ್ಲಿ 600 ಮಂದಿಗೆ  ಲಸಿಕೆ ನೀಡಲಾಗುತ್ತಿದೆ‌.

Advertisement

Advertisement

Udayavani is now on Telegram. Click here to join our channel and stay updated with the latest news.

Next