ಪುಂಜಾಲಕಟ್ಟೆ : ಆರ್ಥಿಕ ಅಭಿವೃದ್ಧಿ ಗೆ ಜೇನು ಕೃಷಿ ಪೂರಕವಾಗಿದೆ. ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಈ ಬಗ್ಗೆ ಮಾರ್ಗದರ್ಶನ ನೀಡುತ್ತಿರುವ ತೆಂಗು ಬೆಳೆಗಾರರ ಸಂಘದ ಕಾರ್ಯ ಅಭಿನಂದನೀಯ ಎಂದು ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ ಅವರು ಹೇಳಿದರು.
ವಾಮದಪದವು ಶ್ರೀ ಗಣೇಶ ಮಂದಿರದಲ್ಲಿ ವಾಮದಪದವು ಕಲ್ಪವೃಕ್ಷ ತೆಂಗು ಬೆಳೆಗಾರರ ಸಂಘ ಮತ್ತು ಬಂಟ್ವಾಳ ಸಹಾಯಕ ತೋಟಗಾರಿಕೆ ಇಲಾಖೆ ವತಿಯಿಂದ ನಡೆದ ಜೇನು ಕೃಷಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚೆನ್ನೈತ್ತೋಡಿ ಗ್ರಾ.ಪಂ. ಅಧ್ಯಕ್ಷ ಯತೀಶ್ ಎಂ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಬಾಲಭವನ ಸೊಸೈಟಿ ಮಾಜಿ ಅಧ್ಯಕ್ಷೆ ಸುಲೋಚನಾ ಜಿ.ಕೆ. ಭಟ್, ತಾ.ಪಂ. ಸದಸ್ಯೆ ರತ್ನಾವತಿ ಜೆ. ಶೆಟ್ಟಿ, ಬಂಟ್ವಾಳ ಸಹಾಯಕ ತೋಟಗಾರಿಕೆ ನಿರ್ದೇಶಕ ದಿನೇಶ್, ವಾಮದಪದವು ಕಲ್ಪವೃಕ್ಷ ತೆಂಗು ಬೆಳೆಗಾರರ ಸಂಘದ ನಿರ್ದೇಶಕರಾದ ಚಂದ್ರಶೇಖರ ಶೆಟ್ಟಿ, ಮೋಹನದಾಸ ಗಟ್ಟಿ, ಕಮಲ್ ಶೆಟ್ಟಿ ಬೊಳ್ಳಾಜೆ ಮತ್ತಿತರರು ಉಪಸ್ಥಿತರಿದ್ದರು.
ತೋಟಗಾರಿಕೆ ಇಲಾಖಾ ನಿರ್ದೇಶಕ ವೀರಪ್ಪ ಗೌಡ ಸುಳ್ಯ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.ವಾಮದಪದವು ಕಲ್ಪವೃಕ್ಷ ತೆಂಗು ಬೆಳೆಗಾರರ ಸಂಘದ ಅಧ್ಯಕ್ಷ ವಿಜಯ ರೈ ಆಲದಪದವು ಸ್ವಾಗತಿಸಿದರು. ಸುಬ್ಬಣ್ಣ ಶಾಸ್ತ್ರಿ ವಂದಿಸಿದರು. ವಾಮದಪದವು ವ್ಯ.ಸೇ.ಸ. ಸಂಘದ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ ಕಾರ್ಯಕ್ರಮ ನಿರೂಪಿಸಿದರು.
ಸ್ವಾವಲಂಬನೆ
ಕೃಷಿ ಕ್ಷೇತ್ರ ವಿಸ್ತಾರಗೊಂಡಿದ್ದು, ವಿಫುಲ ಅವಕಾಶಗಳಿವೆ. ಜೇನು ಕೃಷಿಯಲ್ಲಿ ತೊಡಗಿಸಿಕೊಳ್ಳುವುದರಿಂದ ಲಾಭ ಗಳಿಸಿ ಸ್ವಾವಲಂಬನೆ ಬದುಕು ಸಾಧ್ಯ
- ಎಂ. ತುಂಗಪ್ಪ ಬಂಗೇರ
ಜಿ.ಪಂ. ಸದಸ್ಯರು