Advertisement

ಸಂಪೂರ್ಣವಾಗಿ ಅಫ್ಘಾನ್ ತೊರೆದ ಯುಎಸ್ ಪಡೆ: ತಾವೀಗ ಸ್ವತಂತ್ರರು ಎಂದ ತಾಲಿಬಾನ್

09:01 AM Aug 31, 2021 | Team Udayavani |

ಕಾಬೂಲ್: ಅಮೆರಿಕ ಯೋಧರನ್ನೊಳಗೊಂಡ ಐದು ‘ಸಿ-17′ ವಿಮಾನಗಳು ಸೋಮವಾರ ಮಧ್ಯರಾತ್ರಿ ವೇಳೆಗೆ ಕಾಬೂಲ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳುವ ಮೂಲಕ 20 ವರ್ಷಗಳ ಬಳಿಕ ಅಮೆರಿಕ ಪಡೆಗಳು ಅಫ್ಘಾನಿಸ್ಥಾನವನ್ನು ಸಂಪೂರ್ಣವಾಗಿ ತೊರೆದಿದೆ.

Advertisement

ಆಗಸ್ಟ್ 31ರ ಒಳಗೆ ತೆರವು ಕಾರ್ಯಾಚರಣೆ ಪೂರ್ಣಗೊಳಿಸುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದರು. ಅಫ್ಗಾನಿಸ್ತಾನದಿಂದ ಅಮೆರಿಕನ್ನರ ತೆರವುಗೊಳಿಸುವ ಸೇನಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಅಮೆರಿಕ ಸೇನೆಯ ಜನರಲ್ ಕೆನೆತ್ ಮೆಕೆಂಝಿ ಹೇಳಿದ್ದಾರೆ.

ಯುಎಸ್ ಯೋಧರು ಕಾಬೂಲ್ ವಿಮಾನ ನಿಲ್ದಾಣ ತೊರೆದಿದ್ದಾರೆ. ನಮ್ಮ ದೇಶ ಈಗ ಸಂಪೂರ್ಣ ಸ್ವತಂತ್ರಗೊಂಡಿದೆ’ ಎಂದು ತಾಲಿಬಾನ್ ವಕ್ತಾರ ಜಬಿಯುಲ್ಲಾ ಮುಜಾಹಿದ್ ಹೇಳಿದ್ದಾರೆ.

ಅಫ್ಗಾನಿಸ್ತಾನದಲ್ಲಿ ಸೇನಾ ಕಾರ್ಯಾಚರಣೆಯನ್ನು ನಾವು ಅಂತ್ಯಗೊಳಿಸಿದ್ದೇವೆ. ಆದರೆ ರಾಜತಾಂತ್ರಿಕತೆ ಮುಂದುವರಿಯಲಿದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಹೇಳಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಭೀಕರ ಅಪಘಾತ : 7 ಮಂದಿ ದುರ್ಮರಣ

Advertisement

ಕಳೆದ 20 ವರ್ಷಗಳಿಂದ ಅಫ್ಘಾನಿಸ್ತಾನದಲ್ಲಿ ಬಳಸಿದ್ದ ಎಲ್ಲ ಯುದ್ಧೋಪಕರಣಗಳು ಮತ್ತು ವೈಮಾನಿಕ ವಾಹನಗಳನ್ನು ವಾಪಸ್ ಕೊಂಡೊಯ್ಯಲು ಅಮೆರಿಕಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಬೃಹತ್ ಪ್ರಮಾಣದ ಯುದ್ಧೋಪಕರಣಗಳು ಅಫ್ಘಾನಿಸ್ತಾನದ ತಾಲಿಬಾನಿಯರ ವಶಕ್ಕೆ ಸಿಕ್ಕಿವೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅಮೆರಿಕ ಬಿಟ್ಟು ಹೋಗಿರುವ ಸುಮಾರು 200 ವಿಮಾನ, ಹೆಲಿಕಾಪ್ಟರ್​ಗಳು ಹಾಗೂ 85 ಶತಕೋಟಿ ಡಾಲರ್ ಮೌಲ್ಯದ ಯುದ್ಧೋಪಕರಣಗಳು ತಾಲಿಬಾನ್ ವಶಕ್ಕೆ ಬಂದಿವೆ ಎಂದು ಹೇಳಲಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next