Advertisement

ಆರ್‌ಟಿಇ ಮಾಹಿತಿ ಸೋರಿಕೆ ಉನ್ನತ ತನಿಖೆಗೆ ಆಗ್ರಹ

12:34 PM Mar 15, 2018 | Team Udayavani |

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಸೀಟುಗಳಿಗೆ ಸಲ್ಲಿಸಿದ ಅರ್ಜಿಗಳ ಮಾಹಿತಿಯನ್ನು ಖಾಸಗಿ ಸಂಸ್ಥೆಗೆ ನೀಡಿರುವ ಅವ್ಯವಹಾರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ
ಕಾರ್ಯದರ್ಶಿ ಸೇರಿದಂತೆ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಭಾಗಿಯಾಗಿದ್ದಾರೆ.

Advertisement

ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಮೇಲ್ಮನೆ
ಸದಸ್ಯ ಪುಟ್ಟಣ್ಣ ಆಗ್ರಹಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಆಯುಕ್ತರು, ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ
ಶಿಕ್ಷಣಾಧಿಕಾರಿಗಳ ಕುಮ್ಮಕ್ಕು ಇಲ್ಲದೇ ಯಾವುದೇ ಖಾಸಗಿ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆಗೆ ಸರ್ಕಾರದ
ಮಾಹಿತಿ ಪಡೆದುಕೊಳ್ಳಲು ಸಾಧ್ಯವೇ ಇಲ್ಲ. ಈ ಹಿಂದೆ ಸರ್ಕಾರಿ ಶಾಲೆಯ ಶಿಕ್ಷಕ ಮತ್ತು ಮಕ್ಕಳ ಮಾಹಿತಿಯನ್ನು
ಖಾಸಗಿ ಸಂಸ್ಥೆಗೆ ನೀಡುವ ಒಪ್ಪಂದವನ್ನು ಮಾಡಿಕೊಂಡಿದ್ದರು. ಈಗ ಆರ್‌ಟಿಇ ಮಕ್ಕಳ ಮಾಹಿತಿಯನ್ನು ಖಾಸಗಿ ಸಂಸ್ಥೆಗೆ ನೀಡಲು ಮುಂದಾಗಿದ್ದಾರೆ.

ಇದರಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಆಗಿದೆ. ಇದರ ತನಿಖೆಯನ್ನು ಸಿಐಡಿಗೆ ಒಪ್ಪಿಸಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಆಯಕ್ತರ ಗಮನಕ್ಕೂ ತಂದಿದ್ದೇವೆ. ಸಿಎಂ ಸಿದ್ದರಾಮಯ್ಯ ಮತ್ತು
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್‌ ಸೇಠ್ಠ… ಅವರಿಗೆ ದೂರು ಸಲ್ಲಿಸಲಿದ್ದೇವೆ. ಎಸ್ಸೆಸ್ಸೆಲ್ಸಿ ಮತ್ತು
ಪಿಯುಸಿ ಪರೀಕ್ಷೆ ಸಂದರ್ಭದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ದೀರ್ಘ‌ಕಾಲದ ರಜೆ ಹಾಕುವುದು
ಸರಿಯಲ್ಲ. ಪರೀಕ್ಷೆ ಸಮಯದಲ್ಲಿ ಮಕ್ಕಳ ಸಮಸ್ಯೆಗೆ ಸ್ಪಂದಿಸುವವರು ಯಾರು ಎಂದು ಪ್ರಶ್ನಿಸಿದರು.
 
ಹತ್ತು ದಿನದೊಳಗೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದೇ ಇದ್ದರೆ ಮುಂದಿನ ಹೋರಾಟದ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಂಡು, ಉಗ್ರ ರೀತಿಯಲ್ಲಿ ಹೋರಾಟ ನಡೆಸಲಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. 

Advertisement

ಕಚೇರಿಗೆ ಮುತ್ತಿಗೆ: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಹಾಯಕ ಪ್ರಾಧ್ಯಾಪಕರಾಗಲು ಅರ್ಹತೆ ಪಡೆದಿರುವ ಸುಮಾರು 2 ಸಾವಿರ ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡದೇ ಸತಾಯಿಸುತ್ತಿರುವುದನ್ನು ಖಂಡಿಸಿ ಉನ್ನತ ಶಿಕ್ಷಣ ಸಚಿವ ಬಸವ ರಾಜ ರಾಯರಡ್ಡಿ ಯವರ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿರುವುದಾಗಿ ಮೇಲ್ಮನೆ ಸದಸ್ಯ ಪುಟ್ಟಣ್ಣ
ಇದೇ ವೇಳೇ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next