ಶಿವಮೊಗ್ಗ: ಭದ್ರಾವತಿ ವಿಐಎಸ್ಎಲ್ ಕ್ವಾರ್ಟರ್ಸ್ ಆವರಣದಲ್ಲಿ ಬುಧವಾರ ಮುಂಜಾನೆ ಚಿರತೆ ಕಾಣಿಸಿಕೊಂಡಿದ್ದು, ಇದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.
ವಿಐಎಸ್ಎಲ್ ಆಸ್ಪತ್ರೆ ಪಕ್ಕದಲ್ಲಿ ಚಿರತೆ ಓಡಾಡುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಆಸ್ಪತ್ರೆ ಬಳಿ ಹಲವು ಮನೆಗಳು ಖಾಲಿ ಇವೆ. ಹಾಗಾಗಿ ಚಿರತೆ ಇಲ್ಲಿ ಓಡಾಡುತ್ತಿರುವ ಸಾಧ್ಯತೆ ಇದೆ. ಆದರೆ ಸಮೀಪದಲ್ಲೇ ಜನ ವಾಸಿಸುತ್ತಿರುವ ಮನೆಗಳು ಕೂಡ ಇದ್ದು, ಇದು ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಪಾಕಿಸ್ಥಾನದ ಕರೆ ಪರಿವರ್ತಿಸಿ ಬೇಹುಗಾರಿಕೆ: 58 ಸಿಮ್ ಬಾಕ್ಸ್ , 2,144 ಸಿಮ್‌ಕಾರ್ಡ್ ವಶ
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು, ವಿಚಾರ ತಿಳಿದು ದೊಡ್ಡ ಸಂಖ್ಯೆಯ ಜನರು ವಿಐಎಸ್ಎಲ್ ಕ್ವಾರ್ಟರ್ಸ್ ಬಳಿ ಜಮಾಯಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸಮೀಪದ ಶಾಲೆಯೊಂದಕ್ಕೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.