Advertisement
ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ನಾನು ಅಬಕಾರಿ ಇಲಾಖೆ ವಹಿಸಿಕೊಂಡು 22 ದಿನ ಕಳೆದಿದೆ. ಸರ್ಕಾರಕ್ಕೆ ಜಿ ಎಸ್ ಟಿ ನಂತರ ಹೆಚ್ಚು ರಾಜಸ್ವ ತರುವ ಇಲಾಖೆಯೆಂದರೆ ಅದು ನಮ್ಮ ಅಬಕಾರಿ ಇಲಾಖೆಯಾಗಿದ್ದು, ಇಲಾಖೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಹಾಗೂ ಅಂಕಿ, ಅಂಶಗಳನ್ನು ಆಧರಿಸಿ ಮುಂಬರುವ ಎರಡು ಮೂರು ತಿಂಗಳಲ್ಲಿ ಇಲಾಖೆಯಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಅಬಕಾರಿ ಇಲಾಖೆಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
Related Articles
Advertisement
ರಾಜ್ಯದಲ್ಲಿ ನಾನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಫೆಬ್ರವರಿ 10 ನೇ ತಾರೀಖು ಕೊವಿಡ್ ಸಂದರ್ಭದಲ್ಲಿ ಸಹ ಆಹಾರ ಇಲಾಖೆಯಿಂದ ಯಾವುದೇ ಫುಡ್ ಕಿಟ್ ವಿತರಣೆ ಮಾಡಿಲ್ಲ ಎಂದು ನೂತನ ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ದ್ವಿತೀಯ ಪಿಯು ಪರೀಕ್ಷೆ ಅಧಿಕೃತ ವೇಳಾಪಟ್ಟಿ ಪ್ರಕಟಿಸಿದ ಸಚಿವ ಸುರೇಶ್ ಕುಮಾರ
ರಾಜ್ಯ ಮತ್ತು ಕೇಂದ್ರ ಸರ್ಕಾರದ ಕೊಡುತ್ತಿರುವ ಪಡಿತರ ವ್ಯವಸ್ಥೆಯಲ್ಲಿ ಏಪ್ರಿಲ್ 1 ತಾರಿಖಿನಿಂದ ನವೆಂಬರ್ 30 ತಾರೀಖಿನವರೆಗೂ ಈ ರಾಜ್ಯದಲ್ಲಿರುವ 19 ಸಾವಿರಕ್ಕಿಂತಲೂ ಹೆಚ್ಚಿನ ನ್ಯಾಯಬೆಲೆ ಅಂಗಡಿಗಳ ಮುಖೇನ ಕೇಂದ್ರ ಸರ್ಕಾರದ ಆಹಾರ ಇಲಾಖೆಯಿಂದ 05 kg ಅಕ್ಕಿ ಹಾಗೂ ರಾಜ್ಯ ಸರ್ಕಾರದಿಂದ ನೀಡುವ 05 kg ಅಕ್ಕಿ, ಒಟ್ಟಿಗೆ10 kg ಅಕ್ಕಿ, 1kg ಬೇಳೆ, ಮೂರು ತಿಂಗಳು, ನಂತರ ಐದು ತಿಂಗಳು 10ಕೆಜಿ ಅಕ್ಕಿ, 01 kg ಕಡಲೇ ಕಾಳು, ಮತ್ತು ಒಂದು ಕುಟುಂಬಕ್ಕೆ 2ಕೆಜಿ ಗೋಧಿಯನ್ನು ವಿತರಣೆ ಮಾಡಲಾಗಿದೆ.
ಕೋವಿಡ್ ಸಂದರ್ಭದಲ್ಲಿ ನಾನು ಆಹಾರ ಸಚಿವ ನಾಗಿದ್ದ ಸಮಯದಲ್ಲಿ ನಮ್ಮ ನಾಯಕರು ಹಾಗೂ ಈ ರಾಜ್ಯದ ಜನಪ್ರಿಯ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಬಿ ಎಸ್ ಯಡಿಯೂರಪ್ಪನವರ ಆದೇಶದಂತೆ ರಾಜ್ಯದ ಬೀದರ್ ಜಿಲ್ಲೆಯಿಂದ ಹಿಡಿದು ಚಾಮರಾಜನಗರ ಜಿಲ್ಲೆಯವರೆಗೆ ಯಾರೇ ಆಹಾರದ ಸಮಸ್ಯೆ ಹೇಳಿಕೊಂಡು ನನಗೆ ಹಾಗೂ ಕಚೇರಿಗೆ ಫೋನ್ ಕರೆ ಮಾಡಿದಾಗ ನನ್ನನ್ನೂ ಒಳಗೊಂಡಂತೆ ನಮ್ಮ ಇಲಾಖೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಅವರಿಗೆ ಬೇಕಾದ ಆಹಾರದ ಫುಡ್ ಕಿಟ್ ಗಳನ್ನು ನೀಡುವುದಕ್ಕೆ ವ್ಯವಸ್ಥೆ ಮಾಡಿ ಇಲಾಖೆಯ ಜವಾಬ್ದಾರಿಯನ್ನೂ ನಿರ್ವಹಿಸಿದ ತೃಪ್ತಿ ನಮಗಿದೆ ಎಂದರು.