Advertisement

ಲೋಕಸಭಾ ಚುನಾವಣೆ ಗೆಲ್ಲಲು ಅಣಿಯಾಗಿ

12:35 PM Jul 27, 2018 | Team Udayavani |

ತಿ.ನರಸೀಪುರ: ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲ್ಲಲು ಕಾರ್ಯತಂತ್ರ ರೂಪಿಸಿ ಈಗಿನಿಂದಲೇ ಕಾರ್ಯಕರ್ತರು ಹಾಗೂ ಮುಖಂಡರು ಚುನಾವಣೆಗೆ ಅಣಿಯಾಗಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕೋಟೆ ಎಂ.ಶಿವಣ್ಣ ಹೇಳಿದರು.

Advertisement

ಪಟ್ಟಣದ ಬಾಬು ಜಗಜೀವನ್‌ರಾಂ ಸಮುದಾಯ ಭವನದಲ್ಲಿ ನಡೆದ ವರುಣಾ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಪಕ್ಷಕ್ಕೆ ಅಲ್ಪಮಟ್ಟದ ಹಿನ್ನೆಡೆಯಾದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಿಷ್ಠಿತ ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಗೆಲ್ಲಬೇಕು ಎಂದರು.

ಸವಾಲಾಗಿ ಸ್ವೀಕರಿಸಿ: ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುವುದರಿಂದ ಚುನಾವಣೆಯನ್ನು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸವಾಲಾಗಿ ಸ್ವೀಕರಿಸಬೇಕು. ನಗರ ಮತ್ತು ಪಟ್ಟಣ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆಯೂ ಸದ್ಯದಲ್ಲಿಯೇ ನಡೆಯುವುದರಿಂದ ಎಲ್ಲರೂ ಚುನಾವಣೆಗಳತ್ತ ಗಮನವನ್ನು ಕೇಂದ್ರಿಕರಿಸಬೇಕು ಎಂದು ಕೋಟೆ ಎಂ.ಶಿವಣ್ಣ ಕರೆ ನೀಡಿದರು. 

ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ಮಾತನಾಡಿ, ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇರುವುದರಿಂದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿಯೂ ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ಹೋರಾಟ ಮಾಡಬೇಕು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದಲ್ಲಿ ರಾಜ್ಯದ ವಿಧಾನಸಭೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಯಡಿಯೂರಪ್ಪ ಮತ್ತೂಮ್ಮೆ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಭವಿಷ್ಯ ನುಡಿದರು.

ಸಭೆಯಲ್ಲಿ ಜಿಪಂ ಸದಸ್ಯ ಗುರುಸ್ವಾು, ಮಾಜಿ ಅಧ್ಯಕ್ಷ ಕೆ.ಎನ್‌.ಪುಟ್ಟಬುದ್ಧಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಶೋಕ, ಕಾರ್ಯದರ್ಶಿ ಮೂರ್ತಿ, ರಾಜ್ಯ ಸುತಿ ಸದಸ್ಯರಾದ ಕರೋಹಟ್ಟಿ ಮಹದೇವಯ್ಯ, ಮಹೇಂದ್ರ, ಹಿರಿಯ ಮುಖಂಡ ತೋಟದಪ್ಪ ಬಸವರಾಜು, ಕ್ಷೇತ್ರಾಧ್ಯಕ್ಷ ಶಿವಯ್ಯ, ಪ್ರಧಾನ ಕಾರ್ಯದರ್ಶಿ ಚಿಕ್ಕಮಾದಪ್ಪ ಇನ್ನಿತರರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next