Advertisement
ಸುದ್ದಿಗಾರರೊಂದಿಗೆ ಮಾತನಾಡಿ, ಕರಾವಳಿ ಭಾಗದಲ್ಲಿ ಈ ಬಾರಿ ನಮ್ಮ ಸೀಟು ಹೆಚ್ಚಾಗಲಿದೆ. ಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ. ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದರು ಎಂದರು.
Related Articles
Advertisement
”ರೆಸಾರ್ಟ್ ರಾಜಕೀಯದ ಅವಶ್ಯಕತೆ ಇದೇಯಾ? ನಿಮ್ಮ ಶಾಸಕರನ್ನು ಹೇಗೆ ರಕ್ಷಿಸಿಕೊಳ್ಳುತೀರಿ” ಎಂದು ಪ್ರಶ್ನಿಸಿದ ರಾಷ್ಟ್ರೀಯ ಮಾಧ್ಯಮದ ವರದಿಗಾರನ ಪ್ರಶ್ನೆಗೆ ಕೆರಳಿ ಫುಲ್ ಗರಂ ಆದ ಸಿದ್ದರಾಮಯ್ಯ, ”ಎಲ್ಲರೂ ಬಹುಮತ ಕೊಡುತ್ತಿರುವಾಗ ಶಾಸಕರ ರಕ್ಷಣೆ ಎಲ್ಲಿಂದ ಬರುತ್ತದೆ. ಯಾಕೆ ಇಂತಹ ಪ್ರಶ್ನೆ ಕೇಳಿ ಸುದ್ದಿ ಹಬ್ಬಿಸುತ್ತೀರಾ? ನೀನೇನು ಬಿಜೆಪಿ ವ್ಯಕ್ತಿನಾ, ನಿನೇಗೇಕೆ ಇಂತಹ ಅನುಮಾನಗಳು ಬರಬೇಕು. ಎಲ್ಲಾ ಸಮೀಕ್ಷೆಗಳಲ್ಲೂ ಕಾಂಗ್ರೆಸ್ ಗೆ ಬಹುಮತ ಇದೆ. ನಾವು ಬಹುಮತದೊಂದಿಗೆ ಸರ್ಕಾರ ಮಾಡುತ್ತೇವೆ. ಇಂತಹ ಪ್ರಶ್ನೆಗಳನ್ನ ಕೇಳಿ ಗೊಂದಲದ ಸುದ್ದಿಗಳನ್ನ ಹಬ್ಬಿಸಬೇಡ. ನೀನು ಇನ್ಮುಂದೆ ನನ್ನ ಮುಂದೆ ಪ್ರಶ್ನೆ ಕೇಳಲು ಬರಬೇಡ” ಎಂದರು.