Advertisement

ಕೋವಿಡ್ ಸೋಂಕಿನಿಂದ ಗುಣಮುಖಗೊಂಡಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

07:56 AM May 15, 2020 | Hari Prasad |

ಮೈಸೂರು: ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಕೋವಿಡ್ ಸೋಂಕು ಪತ್ತೆಯಾಗಿದ್ದ 74 ವರ್ಷದ ವ್ಯಕ್ತಿ ಕೋವಿಡ್ ನಿಂದ ಗುಣಮುಖನಾಗಿ 16 ದಿನಗಳ ಬಳಿಕ ಹೃದಯಘಾತದಿಂದ ಮೃತಪಟ್ಟಿದ್ದಾರೆ.

Advertisement

ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಏ.28 ರಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದ ರೋಗಿ ಸಂಖ್ಯೆ. 273 ವ್ಯಕ್ತಿ, ಕೆಲ ದಿನಗಳ ಹಿಂದೆ ತೀವ್ರ ಸ್ವರೂಪದ ಶ್ವಾಸಕೋಶದ ಸಮಸ್ಯೆಯಿಂದ  ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಈ ವ್ಯಕ್ತಿ ಗುರವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರಿಗೆ ಸೋಂಕು‌ ತಗುಲುವ ಮೊದಲಿನಿಂದಲು ಕಿಡ್ನಿ, ಲಿವರ್ ಸಮಸ್ಯೆಯಿಂದಲೂ ಬಳಲುತ್ತಿದ್ದರು.

ಮೃತಪಟ್ಟ ವ್ಯಕ್ತಿ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ನಾಲ್ಕು ಬಾರಿ ಸ್ವ್ಯಾಬ್ ಟೆಸ್ಟ್ ಮಾಡಲಾಗಿದ್ದು, ಈ ವರದಿಗಳಲ್ಲಿ ನೆಗೆಟಿವ್ ಬಂದಿತ್ತು. ಹಾಗಾಗಿ ಇವರು ಕೋವಿಡ್ ಸೋಂಕಿನ ಕಾರಣದಿಂದ ಮೃತಪಟ್ಟಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ‌.

Advertisement

Udayavani is now on Telegram. Click here to join our channel and stay updated with the latest news.

Next