ಚಿಕ್ಕಮಗಳೂರು: ಕೆಲಸದ ಒತ್ತಡದಿಂದ ಶಿಕ್ಷಣ ಇಲಾಖೆಯ ಮ್ಯಾನೇಜರ್ ವೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಜ.1ರ ಸೋಮವಾರ ನಡೆದಿದೆ.
ಮ್ಯಾನೇಜರ್ ನಿಂಗನಾಯಕ್(57) ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಡೂರು ಮೂಲದ ಮೃತ ನಿಂಗನಾಯಕ್ ಅವರು ಕಳೆದ ಎರಡು ವರ್ಷಗಳಿಂದ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ ಅಧಿಕವಾಗಿತ್ತು ಹಾಗೂ ಡಿ ದರ್ಜೆ ನೌಕರರು ಕಡಿಮೆ ಇದ್ದಾರೆ. ಎಲ್ಲಾ ಕೆಲಸ ಸಮಯಕ್ಕೆ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಮನೆಯಲ್ಲಿ ನಿದ್ದೆ ಬರುತ್ತಿರಲಿಲ್ಲ ಎಂದು ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾರೆ.
ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ